NEWSನಮ್ಮರಾಜ್ಯರಾಜಕೀಯ

11 ಜಿಲ್ಲೆಗಳಲ್ಲಿ ಜೂ.14ರ ನಂತರವೂ ಲಾಕ್‌ಡೌನ್‌ ಮುಂದುವರಿಕೆ: ಸಾರಿಗೆ ಬಸ್‌, ಮೆಟ್ರೋ ಸಂಚಾರ ಸದ್ಯಕ್ಕಿಲ್ಲ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರಿಯಲಿದೆ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದಾರೆ.

ಇಂದು ಸಂಜೆ ಸಚಿವರು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ 11 ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಕೋವಿಡ್‌ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಅನ್‌ಲಾಕ್‌ ಆಗಲಿರುವ ಜಿಲ್ಲೆಗಳಲ್ಲಿ ಪ್ರತಿದಿನ ರಾತ್ರಿ 7ರಿಂದ ಬೆಳಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

ಇನ್ನು ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿಸಲಾಗಿದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆ ಶೇ. 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ. ಆದರೆ, ಗಾರ್ಮೆಂಟ್ಸ್​ ಶೇ. 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ವಿವರಿಸಿದರು.

ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಅವಕಾಶವಿದೆ.
ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ 6ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದ ಎಂಟು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೋವಿಡ್ ಲಾಕ್​ಡೌನ್ ವಿನಾಯಿತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು.

ಈ ಜಿಲ್ಲೆಗಳಲ್ಲಿ ಅಗತ್ಯ ವಸ್ತು ಖರೀದಿ ಸಮಯ ಹೆಚ್ಚಳ, ಕೈಗಾರಿಕೆಗೆ ವಿನಾಯಿತಿ ನೀಡುವುದು, ಶೇ. 50ರಷ್ಟು ಸಿಬ್ಬಂದಿ ಕರ್ತವ್ಯ ನಿರ್ವಹಣೆಗೆ ಅವಕಾಶ, ಸೀಮಿತ ಅವಧಿಗೆ ಪಾರ್ಕ್ ಓಪನ್, ಬಸ್ ಸಂಚಾರ ಹಾಗೂ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರದಲ್ಲಿ ಪೂರ್ತಿ ಅವಕಾಶ ಸಾಧ್ಯತೆ ನೀಡುವ ಸಾಧ್ಯತೆ ವ್ಯಕ್ತವಾಗಿತ್ತು. ಹೆಚ್ಚು ಜನ ಸಂದಣಿಗೆ ಕಾರಣವಾಗುವ ಕ್ಷೇತ್ರಗಳಿಗೆ ವಿನಾಯಿತಿ ನೀಡುವುದು ಅನುಮಾನ ಎಂಬುವುದು ಈ ಮುನ್ನವೇ ವ್ಯಕ್ತವಾಗಿತ್ತು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು