NEWSನಮ್ಮಜಿಲ್ಲೆನಮ್ಮರಾಜ್ಯ

ಲೋಕಸಭಾ ಚುನಾವಣೆ: 14 ಕ್ಷೇತ್ರಗಳ 247 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಕೆಲವೆಡೆ ಸಣ್ಣಪುಟ್ಟು ಸಮಸ್ಯೆಗಳನ್ನು ಬಿಟ್ಟರೆ ಬಹುತೇಕ 14 ಲೋಕಸಭಾ ಕ್ಷೇತ್ರಗಳಲ್ಲೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ಇಲ್ಲದಂತೆ ಶಾಂತಿಯುತವಾಗಿ ನಡೆದಿದೆ.

14 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 247 ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರದಲ್ಲಿ ಭದ್ರವಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಮತದಾನ ಅದ್ಧೂರಿಯಾಗಿ ನಡೆದಿದ್ದು, ಸುಡುವ ಬಿಸಿಲನ್ನು ಲೆಕ್ಕಿಸದೇ ಸಾಮಾನ್ಯ ಜನರು ಸೇರಿದಂತೆ ಸಿನಿಮಾ ತಾರೆಯರು, ರಾಜ್ಯದ ಪ್ರಮುಖ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಉದ್ಯಮಿಗಳೂ ಹೀಗೆ ಎಲ್ಲರೂ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮೊದಲ ಹಂತದ ಮತದಾನದ ಬಗ್ಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌.ಹಿತೇಂದ್ರ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದ 14 ಕ್ಷೇತ್ರಗಳಲ್ಲೂ ಬಹುತೇಕ ಶಾಂತಿಯುತ ಮತದಾನವಾಗಿದೆ ಎಂದು ಖುಷಿಯಿಂದ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದ ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಆಯಾಮದಲ್ಲಿ ಎಲ್ಲೂ ಯಾವುದೇ ಸಮಸ್ಯೆ ಆಗಿಲ್ಲ. ಕೆಲವು ಕಡೆ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಇದರಿಂದ ಮತದಾನ ಕೆಲ ಗಂಟೆ ಸ್ಥಗಿತವಾಗಿತ್ತು, ಉಳಿದಂತೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ತಿಳಿಸಿದರು.

ಇನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಮಷಿನ್​ ಧ್ವಂಸಗೊಳಿಸಿದ್ದಾರೆ. ಮತದಾನ ಬಹಿಷ್ಕಾರ ಸಂಬಂಧ ಇಂಡಿಗನತ್ತ ಗ್ರಾಮದಲ್ಲಿ ಗಲಾಟೆ ಆಗಿದೆ. ಒಂದಷ್ಟು ಜನರು ಮತದಾನ ಮಾಡಲು ಬಂದಿದ್ದಾಗ ಗಲಾಟೆ ನಡೆದಿದೆ. ಗ್ರಾಮದಲ್ಲಿ ಹೆಚ್ಚುವರಿ ಭದ್ರತೆ ಕೈಗೊಂಡಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂದಿನ ಪ್ರಕ್ರಿಯೆ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದರು.

ಮೊದಲ ಹಂತದ ಮತದಾನಕ್ಕೆ ಸರ್ವ ರೀತಿ ಭದ್ರತೆ ಕೈಗೊಳ್ಳಲಾಗಿತ್ತು. ರಾಜ್ಯದ 14 ಕ್ಷೇತ್ರಗಳಲ್ಲಿ 70 ಸಿಆರ್‌ಪಿಎಫ್‌, 35 ಸಾವಿರ ಪೊಲೀಸರು, 17 ಸಾವಿರ ಹೋಮ್‌ಗಾರ್ಡ್‌ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು ಎಂದು ವಿವರ ನೀಡಿದ್ದಾರೆ.

ಇವಿಎಂಗೆ ಅಗತ್ಯ ಭದ್ರತೆ: ಸಂಜೆ ಆರು ಗಂಟೆಗೆ ಮತದಾನ ಮುಗಿದ ಬಳಿಕ ಇವಿಎಂಗೆ ಅಗತ್ಯ ಭದ್ರತೆ ಒದಗಿಸಲಾಗುವುದು. ಈಗಾಗಲೇ ಎಲ್ಲ ನಮ್ಮ ಜಿಲ್ಲೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಸೆಕ್ಟರ್ ಮೊಬೈಲ್​​ಗಳ ಭದ್ರತೆಯಲ್ಲಿ ಮಸ್ಟರಿಂಗ್ ಸೆಂಟರ್​ಗಳಿಗೆ ಬರಲಿವೆ. ಮಸ್ಟರಿಂಗ್ ಮುಗಿದ ಮೇಲೆ ಕೌಂಟಿಗೆ ಸೆಂಟರ್​ಗೆ ಭದ್ರತೆ ಮುಖಾಂತರ ಕಳಿಸಲಾಗುವುದು.

ಕೌಂಟಿಂಗ್ ಸೆಂಟರ್​ನಲ್ಲಿ ಚುನಾವಣಾಧಿಕಾರಿಗಳ ಗೈಡ್ ಲೈನ್ ಹಿನ್ನೆಲೆ ಮೂರು ಹಂತದ ಭದ್ರತೆ ಇರಲಿದೆ. ಮೊದಲನೇ ಹಂತದಲ್ಲಿ ಸಿಪಿಎಂಎಫ್ ತುಕಡಿಗಳು ಇರಲಿವೆ. ಎರಡನೇ ಹಂತದಲ್ಲಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್ ಹಾಗೂ ಕೆಎಸ್​ಆರ್​ಪಿ ತುಕಡಿಗಳು. ಮೂರನೇ ಹಂತದಲ್ಲಿ ಸಿಆರ್​ಡಿಆರ್ ಭದ್ರತೆ ಇರಲಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ