ಹಾವೇರಿ: ಮನೆ ಬಾಡಿಗೆ ಕೊಡುತ್ತಿಲ್ಲ, ಅದನ್ನು ವಸೂಲಿ ಮಾಡಿಕೊಡಿ ಎಂದು ಠಾಣೆಗೆ ಹೋದವರಿಗೆ ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುವಾಗ ಪಿಎಸ್‌ಐ ಮತ್ತು ಕಾರು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಣಿಬೆನ್ನೂರು ತಾಲೂಕಿನಲ್ಲಿ ನಡೆದಿದೆ.
ರಾಣಿಬೆನ್ನೂರು ತಾಲೂಕಿನ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ತೇಲಿ ಹಾಗೂ ಕಾರು ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದವರು.
ಫಿರೋಜ್ ಎಂಬುವವರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ಪಿಎಸ್‌ಐ ಸುನೀಲ್ ತೇಲಿ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ನಡುವೆ ಫಿರೋಜ್ ಅವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಪಿಎಸ್‌ಐ ಸುನೀಲ್ ಲೋಕಾಯುಕ್ತ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾರೆ.
ಪಿಎಸ್‌ಐ ಸುನೀಲ್ ಮತ್ತು ಕಾರು ಚಾಲಕ ಸಚಿನ್ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.