CRIMEನಮ್ಮಜಿಲ್ಲೆಶಿಕ್ಷಣ

ಲಾರಿ ಡಿಕ್ಕಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳ ಕರೆದುಕೊಂಡು ಹೋಗುತ್ತಿದ್ದ ಬೈಕ್‌ ಸವಾರ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ತಂದೆ ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕಗ್ಗೋಡ ಗ್ರಾಮ ಸಮೀಪದ 52ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

ವೆಂಕು ಚವ್ಹಾಣ (43) ಮೃತ ಬೈಕ್ ಸವಾರ. ಪುತ್ರಿಯರಾದ ಐಶ್ವರ್ಯಾ, ಪ್ರೀತಿ ಹಾಗೂ ಪಕ್ಕದ ಮನೆ ನಿವಾಸಿ ಶ್ವೇತಾ ರಾಠೋಡ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಮಟಗಿ ತಾಂಡಾದಿಂದ ತಮ್ಮ ಇಬ್ಬರು ಮಕ್ಕಳು ಹಾಗೂ ಪಕ್ಕದ ಮನೆ ನಿವಾಸಿಯನ್ನು ಕಗ್ಗೋಡದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ತೆಲಂಗಾಣ ಮೂಲದ (TS15UA8055) ಲಾರಿ ಹಾಗೂ (KA28HL5603) ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.

ಸದ್ಯ ಗಾಯಾಳುಗಳನ್ನು ವಿಜಯಪುರ ನಗರದ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Deva
the authorDeva

Leave a Reply

error: Content is protected !!