CrimeNEWSನಮ್ಮಜಿಲ್ಲೆ

ಓಡಿಹೋದ ಪ್ರೇಮಿಗಳು : ಯುವಕನ ತಾಯಿ ಬೆತ್ತಲೆಗೊಳಿಸಿ ಹಲ್ಲೆ: ಏಳು ಮಂದಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ : ಪ್ರೀತಿಸಿದ್ದ ಯುವಕನ ಜೊತೆ ಯುವತಿ ಓಡಿ ಹೋಗಿದ್ದಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ವಂಟಮೂರಿ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದ್ದು, ಇದು ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದೆ. ಯುವತಿಯ ಕುಟುಂಬಸ್ಥರು, ಯುವಕನ ಅಮ್ಮನನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ್ದಾರೆ. ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತ ಪ್ರೇಮಿಗಳು ಮನೆಬಿಟ್ಟು ಹೋದ ವಿಚಾರ ತಿಳಿಯುತ್ತಿದ್ದಂತೆ, ರಾತ್ರೋ ರಾತ್ರಿ ಯುವತಿಯ ಕುಟುಂಬಸ್ಥರು ಯುವಕನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹೆಂಚುಗಳನ್ನು ಪುಡಿಪುಡಿಮಾಡಿದ್ದು, ಬಳಿಕ ಬಾಗಿಲು ಮುರಿದು ಒಳನುಗ್ಗಿ ಮಲಗಿದ್ದ ಮಹಿಳೆಯನ್ನು ಹೊರಗೆಳೆತಂದು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಈ ಘನಘೋರ ಕೃತ್ಯವೊಂದು ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿದ ಯುವತಿ ಜೊತೆ ಮಹಿಳೆಯ ಮಗ ಮನೆಬಿಟ್ಟು ಹೋಗಿದ್ದಕ್ಕೆ ಆತನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಹಲ್ಲೆ ಮಾಡಿರುವುದು ಎಷ್ಟು ಸರಿ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.

ಇಲ್ಲಿ ಯುವಕ – ಯುವತಿಯರಿಬ್ಬರದು ಸಮಪಾಲಿದೆ ಆದರೆ, ಕಿಡಿಗೇಡಿಗಳು ಯುವಕನ ಅಮ್ಮನನ್ನು ಬೆತ್ತಲೆಗೊಳಿಸಿರುವುದಕ್ಕೆ ತಕ್ಕ ಶಿಕ್ಷೆಯಾಗಬೇಕು ಎಂದು ಸಾರ್ವಜನಿರು ಆಗ್ರಹಿಸಿದ್ದಾರೆ. ಮಹಿಳೆಯರು ಸೇರಿದಂತೆ ಒಂಬತ್ತು ಜನರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ವಿಷಯ ತಿಳಿದ ಕೂಡಲೇ ಬೆಳಗಾವಿಯ ವಂಟಮೂರಿ ಗ್ರಾಮಕ್ಕೆ ಕಾಕತಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಏಳು ಮಂದಿ ಆರೋಪಿಗಳನ್ನು ಬಂಧಿಸಿರುವುದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...