NEWSನಮ್ಮಜಿಲ್ಲೆ

ತಿ.ನರಸೀಪುರ – ಪೊಲೀಸರು, ಪೌರ ಕಾರ್ಮಿಕರಿಗೆ ಪುರಸಭೆ ಸದಸ್ಯನಿಂದ ಊಟದ ವ್ಯವಸ್ಥೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಪಟ್ಟಣದ ಲಾಕ್ ಡೌನ್ ನಿರ್ವಹಣೆಗೆ ಮತ್ತು ಸ್ವಚ್ಛತೆಗೆ ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ಪೊಲೀಸರು ಹಾಗೂ ಪೌರ ಕಾರ್ಮಿಕರಿಗೆ ಪುರಸಭೆ ಸದಸ್ಯ ವಿ.ಮೋಹನ್ ಭಾನುವಾರ ಮಧ್ಯಾಹ್ನದ ಭೋಜನವನ್ನು ವಿತರಿಸಿದರು.

ಕೋವಿಡ್ -19 ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರಲು ಶ್ರಮಿಸುತ್ತಿರುವ ಪೊಲೀಸರಿಗೆ ಪಟ್ಟಣದ ಪೊಲೀಸ್‌ ಠಾಣೆಯ ಮುಂಭಾಗ ಹಾಗೂ ಸ್ವಚ್ಛತೆಗೆ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ಪುರಸಭೆ ಆವರಣದಲ್ಲಿ ಮಧ್ಯಾಹ್ನದ ಭೋಜನವನ್ನು ಸದಸ್ಯ ವಿ.ಮೋಹನ್ ಉಚಿತವಾಗಿ ಕಲ್ಪಿಸಿದ್ದರು.

ಅಧ್ಯಕ್ಷ ಎನ್.ಸೋಮು ಮಾತನಾಡಿ, ಕೊರೊನಾದಂತಹ ಮಾರಕ ವೈರಾಣು ರೋಗಕ್ಕೆ ದೇಶ ಸಿಲುಕಿರುವ ಸಂಕಷ್ಟದ ಕಾಲದಲ್ಲಿ ಜನರ ಆರೋಗ್ಯವನ್ನು ಕಾಪಾಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಪೊಲೀಸ್‌ ಹಾಗೂ ಪೌರ ಕಾರ್ಮಿಕರು ದುಡಿಯುತ್ತಿದ್ದಾರೆ.

ಲಾಕ್ ಡೌನ್ ನಿಂದಾಗಿ ಶ್ರಮಿಕ ಕೊರೊನಾ ವಾರಿಯರ್ಸ್ ಗಳಿಗೆ ಉಪಾಹಾರ ಹಾಗೂ ಭೋಜನ ಸೌಲಭ್ಯವನ್ನು ಕಲ್ಪಿಸಬೇಕು. ಈ ದೆಸೆಯಲ್ಲಿ ನಮ್ಮ ಸದಸ್ಯ ವಿ.ಮೋಹನ್ ಭೋಜನ ಕಲ್ಪಿಸುವ ಮೂಲಕ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ಸದಸ್ಯ ವಿ.ಮೋಹನ್ ಮಾತನಾಡಿ, ಕೊರೊನಾ ರೋಗ ನಿಯಂತ್ರಣಕ್ಕೆ ನಾವೆಲ್ಲರೂ ಸ್ವಯಂ ಪ್ರೇರಣೆಯಿಂದಲೇ ಜಾಗೃತರಾಗಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಬಳಸಬೇಕು ಎಂದು ಕರೆ ನೀಡಿದರು.

ಪುರಸಭಾ ಸದಸ್ಯ ಅಹಮದ್ ಸಯೀದ್, ಮುಖಂಡರಾದ ಗೋಪಿ ಬೋರೇಗೌಡ, ನಾಗರಾಜು(ಮೊಸರು), ಪ್ರದಿ, ನಿಖಿಲ್, ವಿಶ್ವ(ಡಿ. ವಿ. ಡಿ), ವಿಶು, ಸಂದೀಪ್, ಲಕ್ಷ್ಮಣ್, ಶಿವು ಮತ್ತಿತರರು ಇದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ