NEWSನಮ್ಮರಾಜ್ಯಬೆಂಗಳೂರುರಾಜಕೀಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು-ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನು ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹರಪನಹಳ್ಳಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದರು ಸಿಎಂ ಅವರು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ ಎಂದು ತಿಳಿಸಿದರು.

ಇನ್ನು RSSಅನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೆ ಎಂದರು.

RSS ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯವು ಎಂದು ಮಾಡಬೇಕೆಂದು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನು ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬಿನ ಬೆಲೆ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇತ್ತ ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Megha
the authorMegha

Leave a Reply

error: Content is protected !!