ಮದ್ದೂರು: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆ, ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಧ್ವನಿ ಮತ್ತು ಲಯನ್ಸ್ ಸಂಸ್ಥೆಯ ಸದಸ್ಯರು ಪಟ್ಟಣದಲ್ಲಿ ಪ್ರತಿಭಟಿಸಿದರು.
ಪುರಸಭೆ ಕಚೇರಿ ಆವರಣದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟಿಸಿದ ಸದಸ್ಯರು ಮಣಿಪುರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕ್ರೈಸ್ತ ಬುಡಕಟ್ಟಿನ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಅದೇ ರೀತಿ ಹಿಂಸಾಚಾರದಲ್ಲಿ ಮಹಿಳೆಯರನ್ನು ಗುರಿಯಾಗಿಸಿ ದೌರ್ಜನ್ಯ ಎಸಗುತ್ತಿದ್ದು, ಕೂಡಲೇ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಧ್ವನಿ ಸಂಸ್ಥೆಯ ಅಧ್ಯಕ್ಷ ರಜಿನಿರಾಜ್, ವೀಣಾ, ಯಶೋದಮ್ಮ, ಮಹಾಲಕ್ಷ್ಮಿ, ದೇವಿ ಕೃಪಾ, ಸಲ್ಮಾ ನೇತೃತ್ವ ವಹಿಸಿದ್ದರು.