NEWSನಮ್ಮರಾಜ್ಯವಿಡಿಯೋಸಂಸ್ಕೃತಿ

ಮಹದೇಶ್ವರಬೆಟ್ಟ: ವಿಜೃಂಭಣೆಯಿಂದ ಜರುಗಿತು ಪವಾಡ ಪುರುಷ ಮಾದಪ್ಪನ ದೀಪಾವಳಿ ಮಹಾ ರಥೋತ್ಸವ

ವಿಜಯಪಥ ಸಮಗ್ರ ಸುದ್ದಿ

ಮಹದೇಶ್ವರಬೆಟ್ಟ: ವಿಜೃಂಭಣೆಯಿಂದ ಜರುಗಿತು ಪವಾಡ ಪುರುಷ ಮಾದಪ್ಪನ ದೀಪಾವಳಿ ಮಹಾ ರಥೋತ್ಸವ

ಚಾಮರಾಜನಗರ: ಪವಾಡ ಪುರುಷ ಮಾದಪ್ಪನ ದೀಪಾವಳಿ ಮಹಾ ರಥೋತ್ಸವ ಮಲೆ ಮಹದೇ ಶ್ವರಬೆಟ್ಟದಲ್ಲಿ ಇಂದು ಲಕ್ಷಾಂತರ ಭಕ್ತರ ಸಮ್ಮುಖ ದಲ್ಲಿ ಉಘೇ ಉಘೇ ಮಾದಪ್ಪ ಎಂಬ ಝೇಂಕಾ ರಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.

ಬೆಳಗ್ಗೆ 9ರಿಂದ 9.30ರ ಶುಭ ಮೂಹರ್ತದಲ್ಲಿ ಮಾದಪ್ಪನ ದೀಪಾವಳಿ ಮಹಾ ರಥೋತ್ಸವಕ್ಕೆ ಚಾಲನೆ ದೊರೆಯಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾ ರಥೋತ್ಸವದಲ್ಲಿ ಭಕ್ತರು ಉಘೇ ಉಘೇ ಮಾದಪ್ಪ ಎನ್ನುವ ಘೋಷಣೆಗಳನ್ನು ಮೊಳಗಿಸಿ ಮಾಯಕಾರನ ಭಕ್ತಿರಸದಲ್ಲಿ ಮಿಂದೆದ್ದರು‌.

ಇನ್ನು ರಥದ ಜೊತೆಯಲ್ಲಿ ಹಸಿರು ಸೀರೆಯನ್ನುಟ್ಟು ಹಾಲರವಿಯನ್ನು ಹೊತ್ತಿದ್ದ ಬೇಡಗಂಪಣ್ಣ ಸಮುದಾಯದ 101 ಹೆಣ್ಣುಮಕ್ಕಳ ಮೆರವಣಿಗೆ, ಹುಲಿ ವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನಗಳು, ಜಾನಪದ ಕಲಾತಂಡಗಳು ಪಾಲ್ಗೊಂಡಿದ್ದವು.

ಮಾದಪ್ಪನ ದರ್ಶನ ಪಡೆಯಲೆಂದು ಮಹದೇಶ್ವರ ಬೆಟ್ಟಕ್ಕೆ ಚಾಮರಾಜನಗರ ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಮಂದಿ ಭಕ್ತರು ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಮಾದಪ್ಪನ ದರ್ಶನ ಪಡೆದರು.

ಪವಾಡ ಪುರುಷ ಮಾದಪ್ಪನ ದರ್ಶನ ಪಡೆದು ಹರಕೆ ತೀರಿಸಲು ವಿವಿಧೆಡೆಯಿಂದ ಬಂದಿದ್ದ ಭಕ್ತರು ಮಹಾ ರಥೋತ್ಸವಕ್ಕೆ ಹಣ್ಣು ದವನ ಎಸೆದು ತಮ್ಮ ಹರಕೆ ತೀರಿಸಿದರು.

ಒಟ್ಟಾರೆ ಪವಾಡ ಪುರುಷ ನೆಲೆಸಿರುವ ಮಹದೇಶ್ವ ರಬೆಟ್ಟದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಇಂದು ಮಹಾ ರಥೋತ್ಸವ ಲಕ್ಷಾತರ ಸಂಖ್ಯೆಯ ಭಕ್ತ ವೃಂದದೊಂದಿಗೆ ವಿಜೃಂಭಣೆಯಿಂದ ಜರುಗಿ, ಉಘೇ ಉಘೇ ಮಾದಪ್ಪ, ಉಘೇ ಮಾಯ್ಕಾರ ಎಂಬ ಭಕ್ತರ ಝೇಂಕಾರ ಬೆಟ್ಟದ ತುಂಬೆಲ್ಲಾ ಝೇಂಕರಿಸಿತು.

Leave a Reply

error: Content is protected !!
LATEST
KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ