NEWSನಮ್ಮಜಿಲ್ಲೆಸಂಸ್ಕೃತಿ

ಸಮಾಜ ಏಕತೆಯಿಂದ ಸಾಗಲು ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಶಾಸ್ತ್ರೀಜಿ ದಾರಿದೀಪ: ಸಚಿವ ಕೆಎಚ್‌ಎಂ

ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಮಾಜವನ್ನು ಸಮಾನತೆ, ಏಕತೆಯಿಂದ ಇಡಲು ಪ್ರತಿಯೊಬ್ಬರು ಗಾಂಧೀಜಿ ಹಾಗೂ ಶಾಸ್ತ್ರೀಜಿ ರವರ ಸ್ವಚ್ಛ ಭಾರತ, ಸತ್ಯ, ಅಹಿಂಸೆ ಮುಂತಾದ ಆದರ್ಶಮಯ ಕಾರ್ಯಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜಯಂತಿ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಮಹಾತ್ಮಾ ಗಾಂಧೀಜಿಯವರ ಚಿಂತನೆ, ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಪ್ರತಿವರ್ಷ ಅಕ್ಟೋಬರ್‌ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂ​ಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ, ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಭಾರತ ದೇಶ ಕಂಡ ಅಪ್ರತಿಮ ನಾಯಕ.‌ ಸರಳ ವ್ಯಕ್ತಿತ್ವ ಹೊಂದಿದ್ದ ಮಹಾನ್ ವ್ಯಕ್ತಿಯಾಗಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.

ಬಯ್ಯಪ್ಪಾ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕಿನ ದೇವನಹಳ್ಳಿ ಅಧ್ಯಕ್ಷರಾದ ಜಗನ್ನಾಥ್, ಕೃಷಿ ಸಮಾಜದ ಅಧ್ಯಕ್ಷರಾದ ರವಿ, ರಾಮಚಂದ್ರಪ್ಪ, ಲೋಕೇಶ್, ಮಂಜುನಾಥ್, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ನಗರಾಭಿವೃದ್ಧಿ ಯೋಜನ ನಿರ್ದೇಶಕರಾದ ರಮೇಶ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ