NEWSಆರೋಗ್ಯನಮ್ಮಜಿಲ್ಲೆ

ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಿ ರೋಗದಿಂದ ಮುಕ್ತವಾಗಿ: ಡಾ. ಚೇತನ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ದೇವಲಾಪುರ: ನಾವು ವಾಸಿಸುವ ನಮ್ಮ ಸುತ್ತಲಿನ ಪರಿಸರ ಮನೆಯಲ್ಲಿನ ಸ್ವಚ್ಛತೆ ಕಾಪಾಡಿಕೊಂಡು ರೋಗಮುಕ್ತವಾಗಲು ಸಾರ್ವಜನಿಕರು ಸಹಕರಿಸಬೇಕೆಂದು ವೈದ್ಯಾಧಿಕಾರಿ ಚೇತನ್ ಕರೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ನಾಗಮಂಗಲ ತಾಲೂಕು ದೇವಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ದೇವಲಾಪುರದಲ್ಲಿ ಡೆಂಗ್ಯೂ ಮಾಸಾಚರಣೆ ಹಾಗೂ ಡೆಂಗ್ಯೂ ಜ್ವರ ತರುವ ಇಡಿಸ್ ಸೊಳ್ಳೆ ನಾಶ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮದಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳು ಡ್ರಮ್‌ಗಳು ಇತರೆ ಪದಾರ್ಥಗಳನ್ನು ಘನತಾಜ್ಯ ವಸ್ತುಗಳನ್ನು ಸಮೀಕ್ಷೆ ಮಾಡೋ ಮೂಲಕ ಸಾರ್ವಜನಿಕರುಗಳಿಗೆ ಅರಿವು ಮೂಡಿಸಲಾಯಿತು.

ಮಾರಕವಾದ ಡೆಂಗ್ಯೂ ರೋಗವು ಈಡಿಸ್ ಈಜೀಪ್ಟಿ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು 7 ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ.

ಡೆಂಗ್ಯೂ ಹಾಗೂ ಚಿಕೂನ್‍ಗುನ್ಯಾ ರೋಗಗಳು ವೈರಾಣುವಿನಿಂದ ಬರುವ ಕಾಯಿಲೆಗಳು. ಡೆಂಗ್ಯೂ ಜ್ವರ ಮಾರಕವಾದರೆ, ಚಿಕೂನ್‍ಗುನ್ಯಾ ಮಾರಣಾಂತಿಕವಲ್ಲ. ರೋಗ ಖಚಿತಪಟ್ಟಲ್ಲಿ ಸೂಕ್ತ ಆರೋಗ್ಯ ಕೇಂದ್ರದಿಂದ ಸಲಹೆ ಪಡೆದು ಔಷಧಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.

ಮಾರಕವಾದ ಡೆಂಗ್ಯೂ ರೋಗದಿದ ತಪ್ಪಿಸಿಕೊಳ್ಳಲು ಸ್ವಚ್ಛತೆಯೊಂದೇ ಪರಿಹಾರವಾಗಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ತಮ್ಮ ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ