NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇರುವ ಎಲ್ಲ ಅಂಗಡಿಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡುವುದಕ್ಕೆ ಕಠಿಣ ನಿಯಮ ರೂಪಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್.ತಂಗಡಗಿ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ,‌ ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಈ ಸಂಬಂಧ ತಮ್ಮ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶೇ.60ರಷ್ಟು ಕನ್ನಡ ಬಳಕೆ‌ ಮಾಡದವರ ವಿರುದ್ಧ ಕಠಿಣ ನಿಯಮ‌ ರೂಪಿಸಿ ಎಂದು ಸೂಚನೆ ನೀಡಿದರು.

ಕರ್ನಾಟಕದಾದ್ಯಂತ ಎಲ್ಲ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ಗೆ ಕಠಿಣವಾದ ಅಂತಿಮ ಕರಡು ನಿಯಮ ರೂಪಿಸಿ. ಈ ಮೂಲಕ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ. ಹೀಗಾಗಿ ಕಠಿಣವಾದ ಕ್ರಮ ಆಗಬೇಕು ಎಂದರು.

ಇನ್ನು ಶೀಘ್ರವೇ ನಿಯಮಗಳ ಆದೇಶ ಹೊರಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು.

ಅದರಂತೆ ಬಳಿಕ ವಿಧೇಯಕವನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ತರುವ  ಸಂಬಂಧ  ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂದು  ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ ಡಾ.ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ