NEWSಕೃಷಿನಮ್ಮಜಿಲ್ಲೆ

ಇ-ಕೆವೈಸಿ ಕಡ್ಡಾಯ ಮಾಡಿಸಿ: ರೈತರಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೈ.ಪ್ರಸಾದ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ-ರಾಜ್ಯ ಸರ್ಕಾರದಿಂದ ರೈತರಿಗೆ ಆರ್ಥಿಕ ಬೆಂಬಲ ನೀಡುತ್ತಿದೆ. ಅದಕ್ಕಾಗಿ ರೈತರು ಪಿಎಂ ಕಿಸಾನ್ ಇ-ಕೆವೈಸಿ ಮಾಡಿಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೈ.ಪ್ರಸಾದ್ ತಿಳಿಸಿದರು.

ತಾಲೂಕಿನ ಹಿಟ್ನೆಹೆಬ್ಬಾಗಿರು ಗ್ರಾಮದಲ್ಲಿ ಏರ್ಪಡಿಸಿದ್ದ ಇ-ಕೆವೈಸಿ ಕ್ಯಾಂಪ್ ನಲ್ಲಿ ರೈತರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಧನ ಸಹಾಯ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ತಿಳಿಸುತ್ತಾ ಬಂದಿದ್ದರೂ ತಾಲೂಕಿನಲ್ಲಿ 9 ಸಾವಿರ ರೈತರು ಇ-ಕೆವೈಸಿ ಮಾಡಿಸಿಲ್ಲ ಎಂದು ತಿಳಿಸಿದರು.

ಇನ್ನು ಈ ಯೋಜನೆಯಡಿ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ತಲಾ 2 ಸಾವಿರ, ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತರಿಗೆ ಮುಂದಿನ ಕಂತುಗಳಲ್ಲಿ ಸರ್ಕಾರದ ಸಹಾಯ ಧನ ಸಿಗುವುದಿಲ್ಲ. ಪಿಎಂ ಕಿಸಾನ್ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಸರ್ಕಾರವು ಹಲವು ವಿಧಾನಗಳಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದು, ರೈತರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಿಎಂ ಕಿಸಾನ್ ಪೋರ್ಟಲ್ ಹಾಗೂ ಮೊಬೈಲ್ ನಲ್ಲಿಯೂ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು, ಕೆಲವು ರೈತರಲ್ಲಿ ಹ್ಯಾಂಡ್ರೈಡ್ ಮೊಬೈಲ್ ಇಲ್ಲದಿರುವ ಕಾರಣ ಇಲ್ಲಿ ಕೇಳುವ ಮಾಹಿತಿಯನ್ನು ನಮೂದಿಸಲು ಕಷ್ಟವಾಗುತ್ತದೆ ಅಂಥವರ ಅನುಕೂಲಕ್ಕಾಗಿ ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ.

ಅಲ್ಲದೇ ಇ-ಕೆವೈಸಿ ಆಗದೆ ಇರುವವರ ಸಂಖ್ಯೆ ಹೆಚ್ಚಾಗಿರುವ ಕಾರಣ ಕೃಷಿ ಇಲಾಖೆ ಅಧಿಕಾರಿಗಳು ಆಯಾಯಾ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಅರಿವು ಮೂಡಿಸುವುದರ ಜೊತೆಗೆ ಸ್ಥಳದಲ್ಲೇ ಇ-ಕೆವೈಸಿ ಕ್ಯಾಂಪ್ ನಡೆಸುತ್ತಿದ್ದಾರೆ ರೈತರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಫೌತಿಯಾಗಿದ್ದಲ್ಲಿ ಫಲಾನುಭವಿಗಳು ಪೌತಿ ಖಾತೆಯನ್ನು ಹೊಂದುವ ವಾರಸುದಾರರು ಪಿಎಂ ಕಿಸಾನ್ ಯೋಜನೆಯಡಿ ನೊಂದಾಯಿಸಿಕೊಳ್ಳಲು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈತರು, ಗ್ರಾಮಸ್ಥರು, ಸಾರ್ವಜನಿಕರು ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?