NEWSಸಂಸ್ಕೃತಿ

ಫೆ. 10ರಂದು ರಾಜ್ಯಮಟ್ಟದ ಕಾಯಕ ಶರಣರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಆರ್.ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಜ್ಯಮಟ್ಟದ “ಕಾಯಕ ಶರಣರ” ಜಯಂತಿಯನ್ನು ಫೆಬ್ರವರಿ 10 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಜ್ಯಮಟ್ಟದ “ಕಾಯಕ ಶರಣರ” ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫೆ. 10 ರಂದು ಬೆಳಿಗ್ಗೆ 10 ಗಂಟೆಗೆ ಕಾಯಕ ಶರಣರ ಭಾವಚಿತ್ರ ಮೆರವಣಿಗೆಯು ದೇವನಹಳ್ಳಿ ಟೌನ್‌ನಲ್ಲಿ ನಡೆದು ಡಾ.ಬಿ.ಆರ್ ಅಂಬೇಡ್ಕರ್ ಭವನವನ್ನು ತಲುಪಲಿದೆ. ನಂತರ ಬೆಳಗ್ಗೆ 11 ಗಂಟೆಗೆ ಡಾ.ಬಿ .ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕಲಾ ತಂಡಗಳಿಂದ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ, ಕಾರ್ಯಕ್ರಮದಲ್ಲಿ ಸಮುದಾಯದಲ್ಲಿ ಪದ್ಮಶ್ರೀ ಪ್ರಶಸ್ತಿ‌ ಗೌರವ ಪಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಪಿಂಡಪಾಪನಹಳ್ಳಿ ತಮಟೆ ಮುನಿವೆಂಕಟಪ್ಪ ಅವರನ್ನು ಗೌರವಿಸಲಾಗುವುದು ಹಾಗೂ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರಲ್ಲದೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜಯಂತಿ ಆಚರಣೆಯನ್ನು ಯಶಸ್ವಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದರಲ್ಲದೆ ರಾಜ್ಯಮಟ್ಟದ ಕಾಯಕ ಶರಣರ ಜಯಂತಿಯನ್ನು ಜಿಲ್ಲೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು ಯಾವುದೇ ರೀತಿಯ ಅಡೆತಡೆಗಳು ಉಂಟಾಗದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ