ಮಳವಳ್ಳಿ: ಮನೆಪಾಠಕ್ಕೆಂದು (ಟ್ಯೂಷನ್) ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿ ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿರುವುದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಎನ್ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ದಂಪತಿಯ ಪುತ್ರಿ ದಿವ್ಯಾ (11) ಶವವಾಗಿ ಪತ್ತೆಯಾಗಿರುವ ವಿದ್ಯಾರ್ಥಿನಿ. ಈ ಘಟನೆ ಸಂಬಂಧ ಟ್ಯೂಷನ್ ಶಿಕ್ಷಕ ಕಾಂತರಾಜು (45) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ಟ್ಯೂಶನ್‌ಗೆ ಎಂದು ಮನೆಯಿಂದ ತೆರಳಿದ್ದಾಳೆ. ಬಳಿಕ ಅಂದರೆ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದ್ದಾರೆ. ಆದರೆ, ಬಾಲಕಿ ಪತ್ತೆಯಾಗಿರಲಿಲ್ಲ.
ಇನ್ನಷ್ಟುಗಾಬರಿಗೊಂಡ ಪಾಲಕರು ಸುತ್ತಮುತ್ತಾ ಹುಡುಕಾಡಿದ್ದು, ಆ ವೇಳೆ ಮಳವಳ್ಳಿಯ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪ್‌ನ ಬಳಿ ಹೋಗಿ ನೋಡಿದಾಗ ಶವ ಪತ್ತೆಯಾಗಿದೆ.
ಈ ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್ ಪಿ.ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬಂದ ನಂತರ ಈ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 45yr old tution teacher Kantharaju has been taken into custody after his 6th std student Divya's body was found in a nearby water sump at #Malvalli #Mandya. Ashwini & Suresh's daughter Divya had gone to her tuition & did not return.Her body was found in a water sump #Karnataka pic.twitter.com/rXr0nR6I56
— Imran Khan (@KeypadGuerilla) October 12, 2022