Vijayapatha – ವಿಜಯಪಥ
Saturday, November 2, 2024
CrimeNEWSನಮ್ಮಜಿಲ್ಲೆ

ಮಳವಳ್ಳಿ: ಟ್ಯೂಷನ್ ಶಿಕ್ಷಕನೇ ವಿದ್ಯಾರ್ಥಿನಿ ಕೊಲೆಗಾರ – ಪೊಲೀಸರ ಮುಂದೆ ಒಪ್ಪಿಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಳವಳ್ಳಿ: ಮನೆ ಪಾಠಕ್ಕೆ ಹೋಗಿದ್ದ ಆರನೇ ತರಗತಿ ವಿದ್ಯಾರ್ಥಿನಿ ದಿವ್ಯಾ (10)ಳ ಶವ ಸಂಪಿನಲ್ಲಿ ನಿನ್ನೆ ಪತ್ತೆಯಾದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಟ್ಯೂಷನ್ ಶಿಕ್ಷಕನೇ ಆಕೆಯನ್ನು ಕೊಲೆಗೈದು ಇಷ್ಟೆಲ್ಲಾ ಹೈಡ್ರಾಮಾ ಮಾಡಿದ್ದ ಎಂಬುದನ್ನು  ಪೊಲೀಸರು ಬಾಯ್ಬಿಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿನಿ ದಿವ್ಯಾಳನ್ನು ಟ್ಯೂಷನ್​ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದು ಏನು ಗೊತ್ತಿಲ್ಲದವಂತೆ ನಟಿಸಿದ್ದಾನೆ. ಆರೋಪಿ ಕಾಂತರಾಜ್‌ನನ್ನು ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಪ್ರಕರಣ ಸಂಬಂಧ ಮಳವಳ್ಳಿ ಟೌನ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಕೃತ್ಯ ಎಸಗಿರುವ ಆರೋಪಿಯನ್ನು ಬಿಡಬೇಡಬೇಡಿ ಆತ ಬರುಕುವುದಕ್ಕೆ ಯಾವುಇದೇ ಅರ್ಹತೆ ಇಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಹಿನ್ನೆಲೆ: ಮಂಡ್ಯದ  ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಪಾಲಕರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್‌ಗೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪಾಲಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.

ನಿನ್ನೆ ಬಾಲಕಿಯನ್ನು ಕೊಂದು ಸಂಪಿನಲ್ಲಿ ಎಸೆಯಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದರು. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಇನ್ನು ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೇಸ್​ಗೆ ಮತ್ತಷ್ಟು ತಿರುವು ಸಿಗುವ ಸಾಧ್ಯತೆ ಇದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ