ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡುತ್ತದೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.
ಸಿಎಂ ಸ್ಥಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆ ಅವರಿಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ. ಅವರು ಹಿರಿಯರು, ಅವಕಾಶ ಸಿಕ್ಕಾಗ ಎಲ್ಲ ಅಧಿಕಾರ ಸಿಗಬೇಕು ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್‌ನಲ್ಲಿ ಸಂಜೀವಯ್ಯ, ಸುಶೀಲ್ ಕುಮಾರ್ ಶಿಂಧೆ ಸೇರಿ ಅನೇಕರು ದಲಿತ ಸಿಎಂ ಆಗಿದ್ದಾರೆ. ಖರ್ಗೆಯನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.
Related

Megha








