CrimeNEWSನಮ್ಮರಾಜ್ಯ

ಮಂಡ್ಯ: ಕ್ಯಾಂಟರ್‌ಗೆ ಡಿಕ್ಕಿ ಹೊಡೆದ KSRTC ಬಸ್ – 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಕ್ಯಾಂಟರ್ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ಉಮ್ಮಡಹಳ್ಳಿ ಗೇಟ್ ಬಳಿ ನಡೆದಿದೆ.

ಮಂಡ್ಯ ನಗರದ ಹೊರವಲಯದ ಉಮ್ಮಡಹಳ್ಳಿ ಗೇಟ್‌ನ ಸ್ಯಾಂಜೋ ಆಸ್ಪತ್ರೆ ಬಳಿ ಅವಘಡ ಸಂಭವಿಸಿದ್ದು ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಅದರಲ್ಲೂ ಬಸ್ ನಲ್ಲಿದ್ದ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದು ಇವರಲ್ಲಿ ಐದಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ತುಮಕೂರಿನಿಂದ – ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆದ್ದಾರಿಯಿಂದ ಮಂಡ್ಯ ನಗರಕ್ಕೆ ತೆರಳಲು ಸರ್ವಿಸ್ ರಸ್ತೆಗೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಕ್ಯಾಂಟರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್ ಉರುಳಿ ಬಿದ್ದಿದೆ.

ಪಲ್ಟಿಯಾದ ಕೂಡಲೆ ನೆರವಿಗೆ ಬಂದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್‌ನಲ್ಲಿದ್ದ ಗಾಯಾಳುಗಳನ್ನುಹೊರ ತೆಗೆದು ಹತ್ತಿರವೇ ಇದ್ದ ಸಾಂಜೋ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ‌ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಉರುಳಿ ಬಿದ್ದಿದ್ದ ಬಸ್ಸನ್ನು ಕ್ರೇನ್ ಮೂಲಕ ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ