Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ಮಂಡ್ಯ ಲೋಕಸಭಾ ಚುನಾವಣೆ: ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೋಡ್ ಶೋ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಲೋಕಸಭಾ ಚುನಾವಣೆಯ ಮೆಗಾ ಫೈಟ್‌ಗೆ ಇಂದು ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿಯಾಗಿದ್ದಾರೆ. ಹುಸ್ಕೂರು ಗ್ರಾಮಕ್ಕೆ ಆಗಮಿಸಿದ ನಟ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರೋಡ್ ಶೋ ನಡೆಸಿದ್ದು, ರಾಜಕೀಯ ಚದುರಂಗದಾಟಕ್ಕೆ ನಾಂದಿ ಹಾಡಿದ್ದಾರೆ.

ಇನ್ನು ಈ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಅಸಲಿ ಸ್ಟಾರ್ ವಾರ್ ಈಗ ಶುರುವಾಗಿದೆ. ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಕುಮಾರಸ್ವಾಮಿಗೆ ಎದುರಾಳಿಯಾಗಿ ಕಾಂಗ್ರೆಸ್ ಪಕ್ಷ ಸ್ಟಾರ್ ಚಂದ್ರು ಅವರನ್ನು ಕಣಕ್ಕಿಳಿಸಿದೆ. ಕುಮಾರಸ್ವಾಮಿ ವರ್ಸಸ್ ಸ್ಟಾರ್‌ ಚಂದ್ರು ಮೆಗಾ ಫೈಟ್‌ನಲ್ಲಿ ಪ್ರಚಾರ ರಂಗೇರಿದೆ.

ನಟ ದರ್ಶನ್ ನೋಡಲು ಮಂಡ್ಯದಲ್ಲಿ ಜನರು ಮುಗಿಬಿದ್ದಿದ್ದು, ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಕಿದ್ದಾರೆ. ರೋಡ್‌ ಶೋ ಉದ್ದಕ್ಕೂ ಬಿಲ್ಡಿಂಗ್‌ಗಳ ಮೇಲೆ ಮಹಿಳೆಯರು ನಿಂತಿದ್ದ ದೃಶ್ಯ ಕಂಡು ಬಂದಿದೆ. ದರ್ಶನ್ ರೋಡ್ ಶೋಗೆ ಶಾಸಕ ನರೇಂದ್ರ ಸ್ವಾಮಿ, ಕದಲೂರು ಉದಯ್ ಸಾಥ್ ನೀಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದ ನಟ ದರ್ಶನ್ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾನು ಮೊದಲೇ ಹೇಳಿ ಬಿಡ್ತೀನಿ. ನಾನು ಯಾವುದೇ ಪಕ್ಷದ ಪರ ಪ್ರಚಾರಕ್ಕೆ ಬರಲ್ಲ, ಬರೋದು ಇಲ್ಲ. ನಾನು ಪ್ರಚಾರಕ್ಕೆ ಬರೋದು ಬರೀ ವ್ಯಕ್ತಿ ಪರ. ಇದೇ 5 ವರ್ಷದ ಕೆಳಗೆ ಶಾಸಕರಾದ ನರೇಂದ್ರಣ್ಣ ಅವರು ಮಾಡಿದಂತಹ ಸಹಾಯವನ್ನು ನೆನಪಿಸಿಕೊಳ್ಳುತ್ತೇವೆ ಎಂದರು.

ಇನ್ನು, ಸುಮಮ್ಮ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ನಮಗೆ ಸಹಾಯ ಮಾಡಬೇಕು ಅಂತ ನರೇಂದ್ರ ಸ್ವಾಮಿ ಮೊದಲೇ ಕೇಳಿದ್ದರು. ಫಸ್ಟ್ ಬಂದವರಿಗೆ ಫಸ್ಟ್ ಆದ್ಯತೆ ನೀಡಿದ್ದೇನೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಅಮೂಲ್ಯವಾದ ಮತ ಹಾಕಿ ಎಂದು ದರ್ಶನ್ ಪ್ರೀತಿಯಿಂದ ಕೇಳಿ ಕೊಂಡಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅವರ ಬೆನ್ನಿಗೆ ನಿಂತಿದ್ದ ದರ್ಶನ್ ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅಂದು ಮಗನ ವಿರುದ್ಧ ಪ್ರಚಾರ ಮಾಡಿ ಸುಮಲತಾ ರನ್ನು ಗೆಲ್ಲಿಸಿಕೊಂಡಿದ್ದ ದರ್ಶನ್‌, ಇಂದು ಕುಮಾರಸ್ವಾಮಿ ವಿರುದ್ಧ ಪ್ರಚಾರಕ್ಕೆ ಇಳಿದಿದ್ದಾರೆ.

ಇತ್ತ ಬಿಜೆಪಿ ಸೇರ್ಪಡೆ ಆದ ಬಳಿಕವೂ ಸುಮಲತಾ ಮೌನ ವಹಿಸಿದ್ದು, ಮಂಡ್ಯದಲ್ಲಿ ಬಹಿರಂಗ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿಕೆ ಕಣದಲ್ಲಿದ್ದರೂ, ಮಂಡ್ಯ ಅಖಾಡದಲ್ಲಿ ಕಾಣಿಸಿಕೊಳ್ಳದ ಸುಮಲತಾ, ನನ್ನನ್ನು ಎಚ್‌ಡಿಕೆ ಅಹ್ವಾನಿಸಿಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ