CrimeNEWSನಮ್ಮಜಿಲ್ಲೆ

ಮಂಡ್ಯ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಮೃತ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಖರೀದಿಸಿ ತಿನ್ನಿಸಿದ್ದರು.

ಐಸ್ ಕ್ರೀಂ ತಿಂದ ಕೆಲವೇ ಸಮಯದಲ್ಲಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದೇ ಗ್ರಾಮದ ಬೇರೆ ಮಕ್ಕಳು ಕೂಡ ಆತನಿಂದಲೇ ಐಸ್‌ಕ್ರೀಂ ಖರೀದಿಸಿ ‌ತಿಂದಿದ್ದರು. ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ.

ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?