CrimeNEWSನಮ್ಮರಾಜ್ಯ

ಮಂಗಳೂರು: ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ – ಡಿಜಿಪಿ ಪ್ರವೀಣ್ ಸೂದ್

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಇಲ್ಲಿನ ನಾಗುರಿಯಲ್ಲಿ ನಡೆದ ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರೋದು ದೃಢವಾಗಿದೆ. ಇದು ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಸಾವು- ನೋವು ಹಾನಿ ಉಂಟು ಮಾಡಲು ಈ ಸಂಚು ಮಾಡಲಾಗಿತ್ತು. ಹೀಗಾಗಿ ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಮತ್ತು ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಕೇಂದ್ರದ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗ್ತಿದೆ ಎಂದು ಡಿಜಿಪಿ ಟ್ವೀಟ್‌ ಮೂಲಕ ಹೇಳಿದ್ದಾರೆ. ಪ್ರವೀಣ್ ಸೂದ್​ ಅವರ ಟ್ವೀಟ್​​ನ್ನು ಎಡಿಜಿಪಿ ಅಲೋಕ್ ಕುಮಾರ್ ರೀಟ್ವೀಟ್ ಮಾಡಿದ್ದಾರೆ.

ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣ ಭೇದಿಸಲು ಪೊಲೀಸ್ ಕಮಿಷನರ್ ಮೂರು ತಂಡಗಳ ರಚನೆ ಮಾಡಿದ್ದಾರೆ. ಕಳೆದ ರಾತ್ರಿಯೇ ರಾಜ್ಯದ ವಿವಿಧ ಭಾಗಗಳಿಗೆ ಪೊಲೀಸರ ತಂಡ ತೆರಳಿದೆ. ಸ್ಫೋಟದ ಜಾಡು ಹಿಡಿದು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಯಾಣಿಕನಿಂದ ಅಸ್ಪಷ್ಟ ಮಾಹಿತಿ: ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕ ಪ್ರೇಮ್ ರಾಜ್​ ಪೊಲೀಸರ ಎದುರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾನೆ ಎನ್ನಲಾಗಿದೆ. ಒಮ್ಮೆ ತಾನು ಮೈಸೂರಿನಿಂದ ಬಂದಿದ್ದಾಗಿ ಹೇಳಿದ್ದು, ತನ್ನ ಸೋದರ ಬಾಬುರಾವ್​ಗೆ ಕರೆ ಮಾಡಿ ಅಂತ ನಂಬರ್ ನೀಡಿದ್ದಾನೆ. ಆದರೆ ಕರೆ ಮಾಡಿದ್ರೆ ಆ ವ್ಯಕ್ತಿ ಸಂಬಂಧಿಕನೇ ಅಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ತನಿಖೆಗೆ ಎನ್‌ಐಎ?: ಆಟೋ ಸ್ಫೋಟ ಹಿನ್ನೆಲೆ ಇಂದು ಬೆಂಗಳೂರಿನಿಂದ ಮಂಗಳೂರಿಗೆ ಎನ್​​​ಐಎ ತಂಡ ಆಗಮಿಸುವ ಸಾಧ್ಯತೆಗಳಿವೆ. ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಫೋಟವಾಗಿರುವ ಹಿನ್ನೆಲೆ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಈ ಹಿನ್ನೆಲೆ ಇಂದು ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡ ಆಗಮಿಸಲಿದೆ ಎನ್ನಲಾಗಿದೆ. ಉಗ್ರ ಕೃತ್ಯದ ಆಯಾಮದಲ್ಲಿ ಎನ್​​ಐಎ ತನಿಖೆ ನಡೆಸುವ ಸಾಧ್ಯತೆಗಳಿವೆ. ಮತ್ತೊಂದು ಕಡೆ ಶ್ವಾನದಳದಿಂದ ಸ್ಥಳದ ಪರಿಶೀಲನೆ ನಡೆಸಲಾಗುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ: ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಗಾಯಗೊಂಡವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಮಾತನಾಡುವ ಸ್ಥಿತಿಯಲ್ಲಿಲ್ಲ. ನಮ್ಮ ಮಂಗಳೂರು ಪೊಲೀಸರು ಇದರ ಹಿನ್ನೆಲೆಯನ್ನು ಬೇಧಿಸುತ್ತಿದ್ದಾರೆ. ಮಾಹಿತಿ ಪ್ರಕಾರ ಇದರ ಹಿನ್ನೆಲೆ ಬಹಳ ದೊಡ್ಡದಿದೆ. ಭಯೋತ್ಪಾದನಾ ಸಂಘಟನೆಗಳ ಲಿಂಕ್ ಇದರ ಹಿಂದೆ ಇತ್ತಾ ಅನ್ನೋ ಸೂಚನೆ ಕಂಡು ಬರುತ್ತಿದೆ ಎಂದು ಹೇಳಿದರು.

ಈ ಸಂಬಂಧ ಕೇಂದ್ರ ಭದ್ರತಾ ಪಡೆ ಜೊತೆಗೆ ಮಾತುಕತೆ ನಡೆದಿದೆ. ಅವರು ಸಹ ಬಂದಿದ್ದು, ಜಂಟಿಯಾಗಿ ಕಾರ್ಯಾಚರಣೆ, ತನಿಖೆ ನಡೆಸಲಾಗುತ್ತಿದೆ. ಒಂದೆರೆಡು ದಿನಗಳಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು