NEWSನಮ್ಮರಾಜ್ಯಬೆಂಗಳೂರು

ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್ ಗ್ರೌಂಡ್‌ ಸಜ್ಜು: ಅಪರ ಆಯುಕ್ತ ದಲ್ಜಿತ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ನಗರ ಪಾಲಿಕೆಯಿಂದ ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.

ಇಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರದ ಮಾಣಿಕ್ ಷಾ ಪರೇಡ್ ಗ್ರೌಂಡ್‌ಗೆ ಭೇಟಿ ನೀಡಿ ಇದೇ ಜನವರಿ 26 ರಂದು ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಇದು ರಾಜ್ಯ ಮಟ್ಟದದಲ್ಲಿ ನಡೆಯುವ ಸಮಾರಂಭವಾಗಿದ್ದು, ಯಾವುದೇ ರೀತಿಯಲ್ಲಿ ಲೋಪದೋಷಗಳಾಗದಂತೆ ನೋಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ * ಗ್ರೌಂಡ್‌ನಲ್ಲಿ ಧೂಳು ಹರಡದಂತೆ ಗ್ರೌಂಡ್‌ಗೆ ನೀರು ಹಾಕಿ ರೂಲರ್ ಹಾಯಿಸಿ ಸಮತಟ್ಟಗೊಳಿಸಿದ್ದು, ಮೈದಾನದಲ್ಲಿ ಧೂಳು ಏಳದಂತೆ ಕ್ರಮವಹಿಸಲಾಗಿದೆ.

* ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶ ತ್ಯಾಜ್ಯ ಸ್ವಚ್ಛಗೊಳಿಸಲಾಗಿದೆ. ಇನ್ನಿತರ ಅಗತ್ಯ ಸಿದ್ಧತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಇಂಜಿನಿಯರ್ ಸುಗುಣ, ಕಾರ್ಯಪಾಲಕ ಇಂಜಿನಿಯರ್ ಕಲ್ಲೇಶಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಇತರೆ ಅಧಿಕಾರಿಗಳು ಇದ್ದರು.

Megha
the authorMegha

Leave a Reply

error: Content is protected !!