NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮಣಿಪುರ ಹಿಂಸಾಚಾರ- ಪ್ರಧಾನಿ ಮೋದಿ ರಾಜೀನಾಮೆಗೆ ಎಎಪಿ ಪಟ್ಟು, ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂರು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕೆಂದು ರಾಜ್ಯ ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಅಗ್ರಹಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಣಿಪುರ ರಾಜ್ಯದಲ್ಲಿನ ವರ್ಗ ಸಂಘರ್ಷಗಳನ್ನು ಹತ್ತಿಕ್ಕುವ ಬದಲು ಕೇಂದ್ರ ಸರ್ಕಾರ ತಾನೇ ಖುದ್ದಾಗಿ ನಿಂತು ವೋಟ್ ರಾಜಕಾರಣಕ್ಕಾಗಿ ಹಿಂಸಾಚಾರಗಳಿಗೆ ಆಸ್ಪದ ನೀಡುತ್ತಿರುವ ದುರುಳ ನೀತಿಯನ್ನು ಖಂಡಿಸಲೇ ಬೇಕಾಗಿದೆ ಎಂದು ಹೇಳಿದರು.

ಗೃಹ ಸಚಿವರು ಖುದ್ದಾಗಿ ಐದು ದಿನಗಳ ಕಾಲ ಮಣಿಪುರ ರಾಜ್ಯದಲ್ಲಿ ಮೊಕ್ಕಾಂ ಹೂಡಿ ಬಂದಿದ್ದರೂ ಸಹ ಹಿಂಸಾಚಾರವನ್ನು ತಹ ಬದಿಗೆ ತರಲು ಸಾಧ್ಯವಾಗಲಿಲ್ಲ. ಎರಡು ತಿಂಗಳುಗಳ ಹಿಂದೆ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಬೆತ್ತಲೆ ಪೆರೇಡ್ ಮಾಡಿದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಪ್ರಕರಣವನ್ನು ಮುಚ್ಚಿ ಹಾಕುವ ಕೇಂದ್ರ ಸರ್ಕಾರದ ತಂತ್ರಗಾರಿಕೆ ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಇನ್ನು ಈ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚಿಸದೆ ನಮ್ಮ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಸಂಪೂರ್ಣ ಅವಧಿಗೆ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆ. ಇಂದು ವಿಶ್ವದಲ್ಲಿ ಭಾರತವು ತಲೆತಗ್ಗಿಸುವಂತಹ ಪರಿಸ್ಥಿತಿಗೆ ತಳ್ಳಿರುವ ವಿಶ್ವಗುರು ನರೇಂದ್ರ ಮೋದಿಯವರು ಈ ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚಿಸಿ ರಾಜೀನಾಮೆ ಕೊಟ್ಟು ತೊಲಗಬೇಕು ಎಂದು ನಾಗಣ್ಣ ಆಗ್ರಹಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಅತ್ಯಾಚಾರವನ್ನು ಮಾಡಿ ಬೆತ್ತಲೆ ಮೆರವಣಿಗೆ ಮಾಡುವಂತಹ ಹೀನಾತಿ ಹೀನರಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಕೇಂದ್ರ ಸರ್ಕಾರ ನಿಜಕ್ಕೂ ದೇಶದಿಂದ ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಇತ್ತೀಚಿನ ಕುಸ್ತಿ ಪಟು ಅತ್ಯಾಚಾರ ಪ್ರಕರಣದಲ್ಲಿ ಸಂಸದ ಬ್ರಿಜ್ ಭೂಷಣ್ ರಕ್ಷಣೆಗೆ ನಿಂತಿರುವ ಪ್ರೀತಿಯನ್ನು ಗಮನಿಸಿದರೆ ಕೇವಲ ಭ್ರಷ್ಟಾಚಾರಿಗಳನ್ನು ರಕ್ಷಿಸುತ್ತಿರುವ ಕೇಂದ್ರ ಸರ್ಕಾರ ಈಗ ಅತ್ಯಾಚಾರಿಗಳನ್ನು ಸಹ ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿರುವುದು ಈ ದೇಶದ ದುರಂತವೇ ಸರಿ ಎಂದರು.

ಇತ್ತ ಭಾರತ ಮಾತೆಯನ್ನು ಪೂಜಿಸುವಂತಹ ಸಂಸ್ಕೃತಿ ರಕ್ಷಕರು ಎಂದು ಫೋಜು ನೀಡುತ್ತಾ ಬಂದಿರುವ ಬಿಜೆಪಿಯ ನಿಜ ಬಣ್ಣ ದೇಶದ ಮುಂದೆ ಬೆತ್ತಲಾಗಿದೆ. ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ದೇಶ ಜನ ಕಲಿಸಿಕೊಡುತ್ತಾರೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ನಾಯಕ ವಿಜಯ ಶರ್ಮ, ಮಾಧ್ಯಮ ವಕ್ತಾರೆ ಉಷಾ ಮೋಹನ್, ಪ್ರಕಾಶ್ ನಡುಂಗಡಿ, ಸುಷ್ಮಾ ವೀರ, ಹರಿಹರನ್, ಗೋಪಾಲ್, ಮಹದೇವಸ್ವಾಮಿ, ಫರೀದ್, ಫಿರೋಜ್ ಖಾನ್, ಜ್ಯೋತಿಶ್ ಕುಮಾರ್, ಮರಿಯ, ಮಹಾಲಕ್ಷ್ಮಿ, ಸುಹಾಸಿನಿ ಪಣಿರಾಜ್, ಪುಷ್ಪ ಕೇಶವ್ ಸೇರಿದಂತೆ ಅನೇಕ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ