CrimeNEWSನಮ್ಮಜಿಲ್ಲೆ

ಬೇರೆಯವನೊಂದಿಗೆ ವಿವಾಹ: ನೊಂದ ಯುವತಿ ಪ್ರಿಯಕರನ ಜೊತೆ ನೇಣಿಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಗದಗ: ಪ್ರೀತಿಸಿದ ಯುವತಿಯೊಂದಿಗೆ ವಿವಾಹವಾಗದಿದ್ದರಿಂದ ಮನನೊಂದ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.

ಅಪ್ಪಣ್ಣ ಕನಕಪ್ಪ ಗೊರಕಿ (28), ಲಲಿತಾ ರಾಜೇಂದ್ರ ಹಲಗೇರಿ (24) ಮೃತ ಪ್ರೇಮಿಗಳು. ನರೇಗಲ್ಲ ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇನ್ನು ಇದೇ ಏ.4 ರಂದು ಬೇರೊಬ್ಬ ಯುವಕನೊಂದಿಗೆ ಲಲಿತಾಗೆ ಮದುವೆ ಮಾಡಲಾಗಿತ್ತು. ಆದರೆ ನನ್ನ ಪ್ರಿಯತಮನೊಂದಿಗೆ ಮದುವೆ ಮಾಡಿಕೊಡಲಿಲ್ಲ ಎಂದು ಮಾನಸಿಕವಾಗಿ ನೊಂದಿದ್ದ ಯುವತಿ ಪ್ರೇಮಿಯೊಂದಿಗೆ ಸೇರಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಾನು ಪ್ರೀತಿಸಿದಾತ ಸಿಗದಿದ್ದ ಮೇಲೆ ಈ ಜೀವನವೇ ಬೇಡ ಎಂದು ಯುವತಿ ಅಂದುಕೊಂಡರೆ ನೀನು ಸಿಗದಿದ್ದ ಮೇಲೆ ನನಗೂ ಈ ಜೀವನ ಸಾಕು ಎಂದು ಸಾವಿಗೆ ಶರಣಾಗಿದ್ದಾರೆ.

ಮರವೊಂದರ ಕೊಂಬೆಗೆ ಇಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದು ಸ್ಥಳಕ್ಕೆ ನರೇಗಲ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಕುಡಿದು ಕಾರು ಓಡಿಸಿ ಇಬ್ಬರು ಬಿಜೆಪಿ ಕಾರ್ಯಕರ್ತರ ಜೀವ ತೆಗೆದ ಟ್ರೈನಿ ಪೈಲಟ್: ಬಿಜೆಪಿ ಕಾರ್ಯಕರ್ತರಿಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಗುನಾದಲ್ಲಿ ವೇಗವಾಗಿ ಬಂದ ಕಾರು ಕಾರ್ಯಕರ್ತರಿಬ್ಬರು ಚಲಿಸುತ್ತಿದ್ದ​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ರಘುವಂಶಿ ಹಾಗೂ ಕಮಲೇಶ್ ಯಾದವ್ ಮೃತರು. ಇತ್ತ ಅಪಘಾತ ನಡೆಸಿದ ಕಾರ್​ ಚಾಲಕನನ್ನು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಆತ ಟ್ರೈನಿ ಪೈಲಟ್ ಆಗಿದ್ದು, ಸಹ ಪೈಲಟ್ ಜತೆಗೆ ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ