CrimeNEWSಸಿನಿಪಥ

ಪಾಪಿಗಳು ಕೊಂದ ರೇಣುಕಾಸ್ವಾಮಿಗೆ ಇದೇ ಜೂ.28ಕ್ಕೆ ಮದುವೆಯಾಗಿ ವರ್ಷ- ಹೆಂಡತಿ ಸಹನಾ 5ತಿಂಗಳ ಗರ್ಭಿಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟ ದರ್ಶನ್ ಗೆಳತಿ, ನಟಿಯೂ ಆದ ಪವಿತ್ರಾ ಗೌಡ ಅವರ ಕುರಿತು ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರಿಂದ 33 ವರ್ಷದ ವ್ಯಕ್ತಿ ರೇಣುಕಾಸ್ವಾಮಿ ಹತ್ಯೆಗೀಡಾಗಿರುವುದು ಬಹಿರಂಗವಾಗಿದೆ.

ಈ ಪ್ರಕರಣದಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ, ಕಳೆದ ವರ್ಷವಷ್ಟೇ ಮದುವೆಯಾಗಿದ್ದ. ಆತನ ಪತ್ನಿ ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಹೌದು, ರೇಣುಕಾಸ್ವಾಮಿ ಹಾಗೂ ಸಹನಾ 2023ರ ಜೂನ್‌ 28ರಂದು ಮದುವೆಯಾಗಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರೂ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸುವವರಿದ್ದರು. ಇದರ ಮಧ್ಯೆಯೇ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಸಹನಾ ಈಗ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ರೇಣುಕಾಸ್ವಾಮಿ ಹತ್ಯೆಯಾಗಿರುವ ವಿಚಾರವನ್ನು ಕುಟುಂಬಸ್ಥರು ಇನ್ನೂ ತಿಳಿಸಿಲ್ಲ. ಆಸ್ಪತ್ರೆಯಲ್ಲಿದ್ದಾನೆ, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದಷ್ಟೇ ಹೇಳಿದ್ದಾರೆ. ಪತಿಯ ಸಾವಿನ ವಿಚಾರ ತಿಳಿದರೆ, ಗರ್ಭವತಿಯಾಗಿರುವ ಸಹನಾಗೆ ಏನಾಗುತ್ತದೆಯೋ ಎಂಬ ಭಯದಿಂದ ಕುಟುಂಬಸ್ಥರು ಸಾವಿನ ವಿಚಾರ ತಿಳಿಸಿಲ್ಲ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದು, ಈ ವೇಳೆ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಅಲ್ಲೇ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆದು ಹೋಗಿದ್ದರು.

ಬಳಿಕ ಮೃತದೇಹ ಪತ್ತೆಯಾಗಿದ್ದು, ಆ ವೇಳೆ ಅಪರಿಚಿತ ಶವ ಎಂದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಆ ನಂತರ ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಹೇಳಿಕೆ ನೀಡಿದ್ದರು.

ಇತ್ತ ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಯಿತು ಎನ್ನಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ