CRIMENEWSನಮ್ಮರಾಜ್ಯ

ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು

ಆನೆಗಳ ಕಾದಾಟದಲ್ಲಿ ಮೃತಪಟ್ಟ ಮಹಿಳೆಯ ನೇತ್ರದಾನ ಮಾಡಿ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಈಗ ಮಹಿಳೆಯ ಪಾರ್ಥಿವ ಶರೀರವನ್ನು ಚೆನ್ನೈಗೆ ರವಾನಿಸಲಾಗಿದೆ.‌

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ.

ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದರು. ಕಾದಾಟದಲ್ಲಿ ಕಂಜನ್ ಆನೆ ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಹಾಗೂ ಇತರೆ ಭಾಗಗಳಿಗೆ ತಿವಿದು ಗಾಯ ಗೊಳಿಸಿತ್ತು.

ಬಳಿಕ ಈ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ದುಬಾರೆ ಸಾಕಾನೆ ಶಿಬಿರದಲ್ಲಿ ಡಾ.ಮುಜಿಭ್ ಹಾಗೂ ಚಿಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದೆ.

ಈ ಆನೆಗಳ ಕಾದಾಟದಲ್ಲಿ ಮಹಿಳೆ ಬಲಿ ಪ್ರಕರಣ ಸಂಬಂಧ ಇಂದು ದುಬಾರೆ ಸಾಕಾನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇನ್ನು ಮುಂದಿನ ಆದೇಶದವರೆಗೂ ದುಬಾರೆ ಬಂದ್ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಆನೆಗಳ ಕಾದಾಟದಲ್ಲಿ ಮೃತಪಟ್ಟ ಮಹಿಳೆಯ ನೇತ್ರದಾನ ಮಾಡಿ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಈಗ ಮಹಿಳೆಯ ಪಾರ್ಥಿವ ಶರೀರವನ್ನು ಚೆನ್ನೈಗೆ ರವಾನಿಸಲಾಗಿದೆ.‌

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ