NEWSಆರೋಗ್ಯನಮ್ಮರಾಜ್ಯ

KSRTC, ಬಿಎಂಟಿಸಿಯಲ್ಲಿ ಪ್ರಯಾಣಿಸಲು ಮಾಸ್ಕ್‌ ಕಡ್ಡಾಯ: ಸಚಿವ ರಾಮಲಿಂಗಾ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕೇರಳದಲ್ಲಿ ಕೋವಿಡ್ ಆರ್ಭಟ ಹೆಚ್ಚಾಗಿರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈಗ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್‌ಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಹೀಗಾಗಿ ಈಗ ಸಾರಿಗೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದು, ಪ್ರಯಾಣಿಕರು ಬಸ್‌ಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಬೇಕು ಎಂದು ಸಾರಿಗೆ ಸಚಿವರು ವಿವರಿಸಿದ್ದಾರೆ.

ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡುತ್ತಿದ್ದು, ಎಲ್ಲರ ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ವಿನಂತಿ ಮಾಡಿದ್ದಾರೆ.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ