CrimeNEWSನಮ್ಮರಾಜ್ಯ

ಮುರುಘಾ ಮಠದ ಶ್ರೀಗಳ ವಿಚಾರದಲ್ಲಿ ಸೋಮವಾರ ಭಾರೀ ಬೆಳವಣಿಗೆ: ಮಧ್ಯಾಹ್ನ ಬಂಧನ – ರಾತ್ರಿ ವೇಳೆಗೆ ಬಿಡುಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಇಂದು ಮಧ್ಯಾಹ್ನ ಬಂಧನಕ್ಕೊಳಗಾಗಿದ್ದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ. ಈ ನಡುವೆ ಬಂಧನ ಬಿಡುಗಡೆ ವಿಚಾರದಲ್ಲಿ ಸೋಮವಾರ ಭಾರೀ ಬೆಳವಣಿಗೆಯೇ ನಡೆದಿದೆ.

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸುವಂತೆ ಇಂದು ಜಾಮೀನು ರಹಿತ ವಾರಂಟ್‌ ನೀಡಲಾಗಿತ್ತು. ಇದಕ್ಕೂ ಮುನ್ನಾ ಅಂದರೆ, ಶನಿವಾರ ಜೈಲಿನಿಂದ ರಿಲೀಸ್ ಆಗಿದ್ದರು. ಆದರೆ ಮತ್ತೆ ಇಂದು ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿತು.

ಈ ಬೆನ್ನಲ್ಲೇ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು ದಾವಣಗೆರೆಗೆ ತೆರಳಿ ಶಿವಮೂರ್ತಿ ಶರಣರನ್ನು ಬಂಧಿಸಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾ. ಕೋಮಲಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

ಶ್ರೀಗಳನ್ನು ಜೈಲಿಗೆ ಶಿಫ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ, ಇತ್ತ ಹೈಕೋರ್ಟ್‌ನಲ್ಲಿ ಆರೋಪಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತು. ಎರಡನೇ ಪ್ರಕರಣದ ತನಿಖೆಗೆ ಈಗಾಗಲೇ ಮಧ್ಯಂತರ ತಡೆಯಾಜ್ಞೆ ಪಡೆಯಲಾಗಿದೆ ಎಂಬುದನ್ನು ಆರೋಪಿ ಪರ ವಕೀಲರು ಕೋರ್ಟ್ ಗಮನಕ್ಕೆ ತಂದರು.

ವಿಚಾರಣೆ ವೇಳೆ ಕೆಳ ನ್ಯಾಯಾಲಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಇದು ಹೇಗೆ ಸಾಧ್ಯ? ಹೈಕೋರ್ಟ್ ಕೆಲ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅದನ್ನು ಪಾಲಿಸಬೇಕಲ್ವಾ? ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುವುದಿಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿತು.

ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಹೀಗೆ ಆದರೆ ನಾವು ಕ್ರಮಕೈಗೊಳ್ಳಬೇಕಾಗುತ್ತದೆ. ಅದಕ್ಕೆ ಅವಕಾಶ ಇದೆ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ ಎಚ್ಚರಿಕೆ ನೀಡಿತು. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ ಕೂಡಲೇ ಆರೋಪಿಯನ್ನು ಬಿಡುಗಡೆ ಮಾಡಲು ಸೂಚಿಸಿತು. ಇಷ್ಟೆಲ್ಲ ಬೆಳವಣಿಗಳು ನಡೆಯುವ ಹೊತ್ತಿಗೆ ಸಂಜೆ ಆಗಿತ್ತು.

ಹೀಗಾಗಿ ಶಿವಮೂರ್ತಿ ಶರಣರನ್ನು ಜೈಲಿಗೆ ಹಾಕಲಾಗಿತ್ತು. ಬಳಿಕ ರಾತ್ರಿ 8.30ರ ವೇಳೆಗೆ ಮತ್ತೆ ಜೈಲಿನಿಂದ ಬಿಡುಗಡೆ ಮಾಡಲಾಗಿದ್ದು, ಸದ್ಯ ಶರಣರು ಜೈಲಿನಿಂದ ಹೊರ ಬಂದಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು