CRIMENEWSನಮ್ಮರಾಜ್ಯ

ಚಾರ್ಮಾಡಿ ಘಾಟ್‌ ಅರಣ್ಯ ವ್ಯಾಪ್ತಿಲೀ ಭಾರೀ ಅಗ್ನಿ ಅವಘಡ- ಎಕರೆಗಟ್ಟಲೇ ಅಪರೂಪದ ಹುಲ್ಲುಗಾವಲು ಭಸ್ಮ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಈ ಬೆಂಕಿಯ ಕೆನ್ನಾಲಿಗೆ ಸಿಲುಕಿ ಆಹುತಿಯಾಗಿದೆ.

ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ ತೀವ್ರ ಹಾನಿಯಾಗುವ ಆತಂಕ ಎದುರಾಗಿದೆ.

ಚಾರ್ಮಾಡಿ ಘಾಟ್‌ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ಕೂಡ ವ್ಯಕ್ತವಾಗಿದೆ.

ಇನ್ನು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಆಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ.

ಇತ್ತ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಾರ್ಮಾಡಿ ಘಾಟ್‌ ರಸ್ತೆ ಉದ್ದಕ್ಕೂ ಬೆಂಕಿ ರೇಖೆಗಳನ್ನು ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದು, ಈ ಬೆಂಕಿ ರೇಖೆ ನಿರ್ಮಿಸುವುದರಿಂದ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ಬೆಂಕಿಯಿಂದ ತಪ್ಪಿಸಬಹುದು ಎಂದು ಸ್ಥಳೀಯರು ವಾದಿಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...