
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕೂ ನಿಗಮಗಳ ಸಾರಿಗೆ ನೌಕರರ ಕೂಟ ನಿರ್ವಾಹಕ ಮಹದೇವ ಹುಕ್ಕೇರಿ ಅವರ ಮೇಲೆ ಪುಂಡರು ಹಲ್ಲೆ ಮಾಡಿ ಪೋಕ್ಸೋ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಇದೇ ಫರ.25ರಂದು ಬೆಳಗಾವಿಯಲ್ಲಿ ಬೃಹತ್ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಕೂಡದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳಗಾವಿಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವ ಹುಕ್ಕೇರಿ ಅವರ ಮೇಲೆ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲ ಎಂದು ಹಲ್ಲೆ ಮಾಡಿದ್ದು ಅಲ್ಲದೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ನೀಡಿರುವುದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಸಮಸ್ತ ಸಾರಿಗೆ ನೌಕರರ ಜತೆಗೂಡಿ ಫೆ.25ರ ಮಂಗಳವಾರ ಬೆಳಗೆ ಹತ್ತು ಗಂಟೆಗೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಿಂದ ಬೃಹತ್ ಜಾಥಾ ಹೊರಟು ಬೆಳಗಾವಿಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಕೂಡ ಹಮ್ಮಿಕೊಂಡಿರುವ ಈ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.