NEWSನಮ್ಮಜಿಲ್ಲೆಶಿಕ್ಷಣ-

ಬಿನ್ನಿ ಪಾಠಶಾಲೆ ನಿವೇಶನ ಕಬಳಿಕೆ ಖಂಡಿಸಿ ಆಮ್‌ ಆದ್ಮಿ ಪಾರ್ಟಿಯಿಂದ ಬೃಹತ್‌ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಬಿನ್ನಿಪೇಟೆಯಲ್ಲಿರುವ ಬಿನ್ನಿ ಪಾಠಶಾಲೆಯ ನಿವೇಶನ ಕಬಳಿಸುವ ಸಂಚನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿಯ ಅನೇಕ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮುಖಂಡ ರಾಜಶೇಖರ್ ದೊಡ್ಡಣ್ಣ, ಮೈಸೂರು ಅರಸರು 1902ರಲ್ಲಿ ಬಿನ್ನಿ ಮಿಲ್‌ ಕಾರ್ಖಾನೆಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆಂದು ಈ ನಿವೇಶನವನ್ನು ನೀಡಿದ್ದರು. ಸುಮಾರು 120 ವರ್ಷಗಳಿಂದ ಸರ್ಕಾರಿ ಶಾಲೆಗೆ ಬಳಕೆಯಾಗುತ್ತಿರುವ ಈ ಐತಿಹಾಸಿಕ ನಿವೇಶನದ ಅತಿಕ್ರಮಕ್ಕೆ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

ಶಾಲೆಯ ನಿರ್ವಹಣೆಗಾಗಿ ಬಂದ ಇಟಿಎ ಸಂಸ್ಥೆ ಹಾಗೂ ಬಿನ್ನಿಪೇಟೆ ನಾಗರಿಕ ಹಿತರಕ್ಷಣಾ ಸಂಸ್ಥೆಯು ಪುನರ್‌ ನಿರ್ಮಾಣದ ನೆಪದಲ್ಲಿ ಶಾಲೆಯ ಕಟ್ಟಡವನ್ನು ಮುಂಭಾಗದಲ್ಲಿ ನಿರ್ಮಿಸಿ, ನಿವೇಶನದ ಹಿಂಭಾಗವನ್ನು ಅತಿಕ್ರಮಣ ಮಾಡುತ್ತಿದೆ.

ಬೆಂಗಳೂರಿನ ಹೃದಯಭಾಗದಲ್ಲಿರುವ ಈ ನಿವೇಶನವು ಸುಮಾರು 12,000 ಚದರ ಅಡಿಯಿದ್ದು, ಕೋಟ್ಯಂತರ ರೂಪಾಯಿ ಬೆಲೆಯಿದೆ. ಹೀಗೆ ಅತಿಕ್ರಮಣ ಮಾಡಿಕೊಂಡ ನಿವೇಶನವನ್ನು ಹಲವು ಸೈಟುಗಳಾಗಿ ಮಾಡಿ ಮಾರಾಟ ಮಾಡಲು ಅವೆರಡು ಸಂಸ್ಥೆಗಳ ಜೊತೆಗೆ ಬಿನ್ನಿಪೇಟೆಯ ಸ್ಥಳೀಯ ರಾಜಕೀಯ ಪುಡಾರಿಗಳು ಕೈಜೋಡಿಸಿದ್ದಾರೆ ಎಂದು ರಾಜಶೇಖರ್‌ ದೊಡ್ಡಣ್ಣ ಹೇಳಿದರು.

ಏಕಾಏಕಿ ಜೆಸಿಬಿ ತಂದು ಶಾಲೆಯ ಕಟ್ಟಡವನ್ನು ಧ್ವಂಸ ಮಾಡುತ್ತಿರುವ ವೇಳೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕೋಶ ವ್ಯಕ್ತಪಡಿಸಿದರು. ಅನೇಕ ಸ್ಥಳೀಯ ನಾಗರಿಕರು ಪ್ರತಿಭಟನೆಗೆ ಬೆಂಬಲ ನೀಡಿದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC