NEWSನಮ್ಮಜಿಲ್ಲೆನಮ್ಮರಾಜ್ಯ

ಪರಿಶಿಷ್ಟರ ₹11 ಸಾವಿರ ಕೋಟಿ ದುರ್ಬಳಕೆ ಮಾಡಿಕೊಂಡ ಸರ್ಕಾರ: ಆ.5ರಂದು ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ ಎಂದು ಆಮ್ ಆದ್ಮಿ ಪಕ್ಷದ ಎಸ್ಸಿ-ಎಸ್ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ ಆರೋಪಿಸಿದ್ದಾರೆ.

ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ಸಿ -ಎಸ್ಪಿ / ಟಿಎಸ್ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ಈ ವರ್ಗಕ್ಕೆ ಮಾಡಿದ ಮಹಾ ಅನ್ಯಾಯ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಇದೇ ರೀತಿಯ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿದ ದಲಿತ ವರ್ಗ ಇಂದು ಮಹಾ ಮೋಸಕ್ಕೆ ಒಳಗಾಗುತ್ತಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು 14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ 4079 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಇಟ್ಟಿದ್ದೆವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳುತ್ತಾ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.

ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯಾವಾಗುವುದನ್ನು ನಾವು ಸಹಿಸುವುದಿಲ್ಲ. ಹೋರಾಟದ ಹಾದಿಯನ್ನು ತುಳಿಯುತ್ತೇವೆ ಎಂದು ಪುರುಷೋತ್ತಮ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ, ಹೇಳುವುದು ಒಂದು ಮಾಡುವುದು ಇನ್ನೊಂದು ಎಂಬುವುದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ.

ಇದೇ ತಿಂಗಳ ಆಗಸ್ಟ್ 5ರ ಶನಿವಾರ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡ ಗಂಗಬೈಲಪ್ಪ ಇನ್ನಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು