NEWSನಮ್ಮಜಿಲ್ಲೆನಮ್ಮರಾಜ್ಯ

ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್ಆರ್‌ಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘ, ಚಿಕ್ಕಬಳ್ಳಾಪುರ ವತಿಯಿಂದ ಆಯೋಜಿಸಿದ್ದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ನಗರದ ರಿಚ್ಮಂಡ್ ವೃತ್ತದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿತು.

“ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮದಂದು (ಸೆ.27  )ಜರುಗಿದ ಈ ಬೃಹತ್‌ ಪ್ರತಿಭಟನೆಯಲ್ಲಿ ಸಂಯಮ, ಶಿಸ್ತು ಮತ್ತು ಶಾಂತಿಗೆ ಹೆಸರಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ಇತರೆ ಹತ್ತಾರು ಕಂಪನಿಗಳ ಸಾವಿರಾರು ನಿವೃತ್ತ ನೌಕರರು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ, ನಿವೃತ್ತರ ಆಕ್ರೋಶ (akrosha)ದ ಕಟ್ಟೆ ಒಡೆದಿತ್ತು.

ಈ ಪ್ರತಿಭಟನೆಗೆ ಸಮರೋಪಾದಿಯಲ್ಲಿ ಜನಸಾಗರವೇ ನೆರೆದಿತ್ತು. ನಿವೃತ್ತರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಚೇರಿ ಆವರಣದಲ್ಲಿ ಪಥಸಂಚಲನ ನಡೆಸುತ್ತಾ, ಅಧಿಕಾರಿಗಳ ವಿರುದ್ಧ ಕೂಗಿದ ಧಿಕ್ಕಾರದ ಘೋಷಣೆ ಮಾರ್ದನಿಸಿತು. ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪನವರು ಎಲ್ಲ ಮುಖಂಡರು ಹಾಗೂ ಪ್ರತಿಭಟನಾಕಾರರನ್ನು ಸ್ವಾಗತಿಸಿ, ಹೋರಾಟದ ರೂಪುರೇಷೆ ಬಗ್ಗೆ ವಿವರಿಸಿದರು.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯ ಸಂಯೋಜಕ ರಮಕಾಂತ ನರಗುಂದ ಮಾತನಾಡಿ, ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವಿದ್ದು, ಅದರಂತೆ ಅವರು ಹೆಚ್ಚುವರಿ ಪಿಂಚಣಿ ಪಡೆಯಲು ಅವಕಾಶವಿದೆ. ಕನಿಷ್ಠ ಹೆಚ್ಚುವರಿ ಪಿಂಚಣಿ ಪಡೆಯಲು ಯಾವುದೇ ಕೋರ್ಟ್ ಆದೇಶವಿರುವುದಿಲ್ಲ. ಅದಕ್ಕಾಗಿ ನಾವು ನಮ್ಮ ಹೋರಾಟವನ್ನು ಮುಂದುವರಿಸಿ, ಎಲ್ಲರಿಗೂ ನ್ಯಾಯ ದೊರಕಿಸಲು ಎನ್ಎಸಿ ಸಂಕಲ್ಪ ಮಾಡಿದೆ ಎಂದರು.

ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು ಇಂದು ದೇಶಾದ್ಯಂತ ಹಮ್ಮಿಕೊಂಡಿರುವ “ನಿಧಿ ಅಪ್ಕೆ ನಿಕಟ್” ಕಾರ್ಯಕ್ರಮ ಕೇವಲ ವ್ಯರ್ಥ ಪ್ರಯತ್ನವಾಗಿದ್ದು, ಇದರಿಂದ ನಿವೃತ್ತರಿಗೆ ಯಾವುದೇ ಪ್ರಯೋಜನವಿಲ್ಲ. ಕೇಂದ್ರ ಸರ್ಕಾರದ ಉದ್ಯೋಗ ಮತ್ತು ಕಾರ್ಮಿಕ ಸಚಿವ ಮುನ್ಸುಖ್ ಮಾಂಡವೀಯಾ ಅವರು ಇತ್ತೀಚೆಗೆ ಹೇಳಿಕೆ ನೀಡಿ, ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಎಲ್ಲ ಇಪಿಎಸ್ ಪಿಂಚಣಿದಾರರ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗುವುದು ಎಂದು ಹೇಳಿರುವುದು ಅತ್ಯಂತ ಸ್ವಾಗತರ್ಹ ಎಂದರು.

ಎಲ್ಲ ನಿವೃತ್ತರು ಒಗ್ಗಟ್ಟು ಪ್ರದರ್ಶಿಸಬೇಕು, ಇನ್ನೂ ಅಸಂಖ್ಯಾತ ಸಂಖ್ಯೆಯಲ್ಲಿ ನಿವೃತ್ತರು ಪ್ರತಿಭಟನಾ ಸಭೆಗೆ ಆಗಮಿಸಬೇಕು ಎಂದು ಎನ್ಎಸಿ ಅಧ್ಯಕ್ಷ ಜಿಎಸ್‌ಎಮ್ ಸ್ವಾಮಿ ಅವರು ಕರೆ ನೀಡಿ, ಅಧಿಕಾರಿಗಳು ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸದೆ ಹೋದಲ್ಲಿ ದೇಶಾದ್ಯಂತ ಎಲ್ಲ ಇಪಿಎಸ್ ನಿವೃತ್ತರು ವಿನೂತನ ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಅಧ್ಯಕ್ಷ ಶಂಕರ್ ಕುಮಾರ್ ಸಭೆಯಲ್ಲಿ ಮಾತನಾಡಿ, ನಮ್ಮ ಹೋರಾಟ ಇಷ್ಟಕ್ಕೆ ನಿಲ್ಲುವುದಿಲ್ಲ, ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳ ಮೇಲೆ ಒತ್ತಡ ಹೇರಬೇಕು ಹಾಗಾಗಿ ಅಧಿಕ ಸಂಖ್ಯೆಯಲ್ಲಿ ನಿವೃತ್ತರು ಮುಂದಿನ ದಿನಗಳ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಉಪಾಧ್ಯಕ್ಷ ಸುಬ್ಬಣ್ಣ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ನೀತಿ ಅನುಸರಿಸುತ್ತಿದ್ದು, ಇಪಿಎಸ್ ನಿವೃತ್ತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಪಿಂಚಣಿ ಲೆಕ್ಕಾಚಾರದ ತಕ್ತೆ (caliculation) ನೀಡುತ್ತಿಲ್ಲ ಎಂದು ತಮ್ಮ ಆಕ್ರೋಶ (akrosha) ವ್ಯಕ್ತಪಡಿಸಿದರು. ನ್ಯಾಯಾಲಯದ ತೀರ್ಪು ಪ್ರಕಟಗೊಂಡು ಎರಡು ವರ್ಷ ಕಳೆದಿದ್ದು, ಈ ತೀರ್ಪನ್ನು ಅನುಷ್ಠಾನಗೊಳಿಸದ ಅಧಿಕಾರಿಗಳ ವರ್ತನೆ ಖಂಡನೀಯ ಎಂದರು.

ಚಿಕ್ಕಬಳ್ಳಾಪುರ, ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿ, ಇಪಿಎಫ್ಒ ಕಚೇರಿಗೆ ಬೀಗ ಹಾಕುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಮಾಡಿಯೇ ತೀರುವುದಾಗಿ ಘೋಷಿಸಿದರು.

ಅಂತಿಮವಾಗಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಸಾವಿರಾರು ನಿವೃತ್ತರನ್ನು ಅವರು ದಿಗಿಲುಗೊಂಡರು. ಮುಂದಿನ ದಿನಗಳಲ್ಲಿ ಮುಂಚಿತವಾಗಿ ತಮಗೆ ಮಾಹಿತಿ ನೀಡಬೇಕೆಂದು ತಿಳಿಸಿದರು. ಇನ್ನು ಮನವಿ ಪತ್ರ ಸ್ವೀಕರಿಸಲು ಸ್ಥಳಕ್ಕಾಗಮಿಸಿದ ಇಪಿಎಫ್ಒ ಅಧಿಕಾರಿಗಳಿಗೆ ಈ ವರೆಗಿನ ಎಲ್ಲ ಬೆಳವಣಿಗೆಗಳನ್ನು ತಿಳಿಸುವಂತೆ ಮುಖಂಡರು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಿ, ನಿವೃತ್ತರ ಸಂಕಷ್ಟ ತಮಗೂ ತಿಳಿದಿದ್ದು, ಇನ್ನೊಂದು ತಿಂಗಳಲ್ಲಿ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ನಂತರ ನಮ್ಮ ಮನವಿಪತ್ರವನ್ನು ಸ್ವೀಕರಿಸಿ, ನಮ್ಮ ಎಲ್ಲ ಮನವಿ ಪತ್ರಗಳನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಈಗಾಗಲೇ ಕಳುಹಿಸಿಕೊಟ್ಟಿದ್ದು, ಅದರ ಎಲ್ಲಾ ವಿವರಗಳನ್ನು ನೀಡುವುದಾಗಿ, ಇಂದಿನ ಮನವಿ ಪತ್ರವನ್ನು ಸಹ ತಮ್ಮ ಉಲ್ಲೇಖದೊಂದಿಗೆ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ.

ಪದಾಧಿಕಾರಿಗಳಾದ ನಾಗರಾಜು, ರುಕ್ಮೇಶ್ ಹಾಗೂ ಮನೋಹರ್ ಅವರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿಕೊಟ್ಟರು. ಪ್ರತಿಭಟನೆ ಅತ್ಯಂತ ಆವೇಶ ಭರಿತವಾಗಿತ್ತು. ಕೇಂದ್ರ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ. ಪ್ರತಿಭಟನಾ ನೇತೃತ್ವವನ್ನು ಕೆಎಸ್ಆರ್ ಟಿಸಿ ಕ್ಷೇಮಾಭಿವೃದ್ಧಿ ಸಂಘ, ಚಿಕ್ಕಬಳ್ಳಾಪುರದ ಪದಾಧಿಕಾರಿಗಳಾದ ವೇಲೂರು ಅಮರ್, ಜೆ.ಎನ್. ಶ್ರೀನಿವಾಸ ನಾಯ್ಡು, ಬ್ರಹ್ಮಚಾರಿ,.ಡಿ.ವಿ.ಅಂಜನಪ್ಪ, ಕೆ.ರಮೇಶ್ ಎಂ. ನಾರಾಯಣಸ್ವಾಮಿ ಸುದರ್ಶನಾಚಾರಿ, ಸತ್ಯನಾರಾಯಣ, ಸೊಣ್ಣಪ್ಪ ವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು