NEWSನಮ್ಮಜಿಲ್ಲೆನಮ್ಮರಾಜ್ಯ

EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ಎನ್ಎಸಿ ಹಾಗು ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ವತಿಯಿಂದ ಇದೇ 28ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ನಡೆದ ಇಪಿಎಸ್ ಪಿಂಚಣಿದಾರರ 28ನೇ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ಇಪಿಎಸ್ ನಿವೃತ್ತರಿಗೆ ಹಾಗೂ ಇಪಿಎಸ್ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ. ಕೂಡಲೇ ನೀಡಬೇಕೆಂದು ಆಗ್ರಹಿಸಿದರು.

ಇನ್ನು ಅಧಿಕ ಪಿಂಚಣಿಗೆ ಸಂಬಂದಿಸಿದಂತೆಯೂ ಸಹ ಹಲವಾರು ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಇದೊಂದು ವ್ಯರ್ತ ಪ್ರಯತ್ನವಾಗಿದ್ದು, ಈ ಅಧಿಕಾರಿಗಳಿಗೆ ನಿವೃತ್ತರ ಬಗ್ಗೆ ಯಾವುದೇ ಕಳಜಿ ಇಲ್ಲ ಎಂದು ಅಧಿಕಾರಿಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಕಾರ್ಯಾಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ಇಪಿಎಸ್ ನಿವೃತ್ತರು ತೀವ್ರ ಸಂಕಷ್ಟದಲ್ಲಿದ್ದು, ಕಳೆದೊಂದು ದಶಕದಿಂದ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಎನ್ಎಸಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾವತ್ ಅವರ ನೇತೃತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಹೋರಾಟ ಮಾಡುತ್ತಿದ್ದರೂ ಸಹ ಇದುವರವಿಗೂ ಯಾವುದೇ ಪ್ರತಿಫಲ ಸಿಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು, ಇಪಿಎಸ್ ನಿವೃತ್ತರು ಅಧಿಕ ಪಿಂಚಣಿಗೆ ಅರ್ಹರಿದ್ದರೂ ಸಹ, ಸಲ್ಲದ ನಿಯಮಗಳನ್ನು ಸೃಷ್ಟಿಸಿಕೊಂಡು, ನಿವೃತ್ತರನ್ನು ನಿರಂತರವಾಗಿ ವಂಚಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಮ್ಮ ತಪ್ಪಿನ ಅರಿವಾಗಿ, ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಅಧಿಕ ಪಿಂಚಣಿ ನೀಡಲೇಬೇಕಾಗುತ್ತದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಟ್ರಸ್ಟ್‌ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿ, ದೇಶಾದ್ಯಂತ ಇರುವ ಎಲ್ಲ 78 ಲಕ್ಷ ನಿವೃತ್ತರು ಸಂಕಷ್ಟದಲ್ಲಿದ್ದು, ಹಿರಿಯ ಚೇತನಗಳಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತಾ, ಒಟ್ಟಾಗಿ ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಪಿಎಸ್ ನಿವೃತ್ತರು ಭಾಗಿಯಾದಲ್ಲಿ, ನಮಗೆ ಜಯ ಶತಸಿದ್ದ ಎಂದು ತಿಳಿಸಿದರು.

ಮೇಲೂರು ಅಮರ್ ಹಾಗೂ ನಾರಾಯಣರಾವ್ ಮಾತನಾಡಿ, ಬೃಹತ್ ಸಂಖ್ಯೆಯಲ್ಲಿ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಟ್ರಸ್ಟ್ ಪದಾಧಿಕಾರಿಗಳಾದ ಶ್ರೀನಿವಾಸನಾಯ್ಡು, ಸೂಣ್ಣಪ್ಪ, ಎಂ. ನಾರಾಯಣಸ್ವಾಮಿ, ಹಾಗೂ ಡಿ.ವಿ. ನಾರಾಯಣಸ್ವಾಮಿ ಹಲವಾರು ಮುಖಂಡರು ಇದ್ದರು. ಇನ್ನು ಸಂಘದ ಪದಾಧಿಕಾರಿಗಳಾದ ನಾಗರಾಜು, ರುಕ್ಮೆಶ್ ಹಾಗೂ ಕೃಷ್ಣಮೂರ್ತಿ ಅತ್ಯಂತ ಯಶಸ್ವಿಯಾಗಿ ಸಭೆಯನ್ನು ನಡೆಸಿಕೊಟ್ಟರು.

ಇನ್ನು ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಯೊಂದಿಗೆ ಮನವಿ ಪತ್ರವನ್ನು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ(minister for labour & employment) ಸಚಿವರಾದ ಮುನ್ಸೂಕ್ ಮಾಂಡವೀಯ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಈ ದಿನವೇ ಕಳುಹಿಸಿಕೊಡಬೇಕೆಂದು ಅಧಿಕಾರಿಗಳಿಗೆ ನೀಡಲಾಯಿತು. ನಮ್ಮ ಸಂಘದ ಖಜಾಂಚಿ ಡೋಲಪ್ಪನವರು ಎಲ್ಲ ಮುಖಂಡರು ಹಾಗೂ ಪ್ರತಿಭಟನಾಕಾರರನ್ನು ಸ್ವಾಗತಿಸುವ ಮೂಲಕ ಸಭೆಗೆ ಚಾಲನೆ ನೀಡಿದರು.

ಅಂತಿಮವಾಗಿ ಇಪಿಎಫ್ಒ ಅಧಿಕಾರಿಗಳು ನಮ್ಮ ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಾ, ಇಂದಿನ ಸಭೆಯ ಸಂಪೂರ್ಣ ವಿವರಗಳನ್ನು ಕೇಂದ್ರ ಸಚಿವರ ಕಾರ್ಯಾಲಯಕ್ಕೂ ಹಾಗೂ ದೆಹಲಿಯಲ್ಲಿನ ತಮ್ಮ ಮೇಲಧಿಕಾರಿಗಳಿಗೂ ಕಳಿಸಿ ಕೊಡುವುದಾಗಿ ಅಧಿಕಾರಿಗಳು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ