NEWSನಮ್ಮಜಿಲ್ಲೆನಮ್ಮರಾಜ್ಯ

ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆಯನ್ನು ಇದೇ ಅಕ್ಟೋಬರ್ (October) 28ರಂದು ಬೆಳಗ್ಗೆ 11 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಪತ್ರಿಕಾ ಹೇಳಿಕೆ ನೀಡಿದ್ದು, ಇಪಿಎಫ್ಒ ಅಧಿಕಾರಿಗಳ ವರ್ತನೆ ಎಲ್ಲೇ ಮೀರಿದ್ದು, ಸರ್ವೋಚ್ಚ ನ್ಯಾಯಾಲಯವು ಸುನಿಲ್ ಕುಮಾರ್ ಪ್ರಕರಣದಲ್ಲಿ ಇಪಿಎಸ್ ಪಿಂಚಣಿದಾರರ ಪರವಾಗಿ ನೀಡಿರುವ ತೀರ್ಪು ಒಂದಲ್ಲ, ಎರಡು ವರ್ಷ ಕಳೆದಿದ್ದರೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ, ದುಂಡಾವರ್ತನೆ ತೋರುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ರೀತಿ ವಿಳಂಬಧೋರಣೆ ತಳೆದಿರುವ ಅಧಿಕಾರಿಗಳಿಗೆ ಕಡಿವಾಣ ಹಾಕುವ ಕಾಲ ಸನ್ನಿಹಿತವಾಗಿದೆ. ಪಿಂಚಣಿದಾರರ ನ್ಯಾಯಯುತ ಪಿಂಚಣಿ ಹಕ್ಕಿಗಾಗಿ ನಮ್ಮ ಹೋರಾಟವನ್ನು ಪ್ರಾರಂಭಿಸಿ ದಶಕಗಳೇ ಕಳೆದಿವೆ. ಆದರೂ ಈ ವರವಿಗೂ ಯಾವುದೇ ಪ್ರಗತಿ ಕಾಣದೇ ಇರುವುದು ಅತ್ಯಂತ ದುರಂತದ ಸಂಗತಿ ಎಂದು ಅಧಿಕಾರಗಳ ನಡೆಗೆ ಅಸಮಾಧಾಣ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ಸ್ವಾಮ್ಯದ ಕಾರ್ಖಾನೆಗಳ ಲಕ್ಷಾಂತರ ನಿವೃತ್ತ ನೌಕರರು ತಮ್ಮ ಬದುಕಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸಿದರೂ ಸಹ ಯಶಸ್ಸು ಮಾತ್ರ ಇಂದಿಗೂ “ಶೂನ್ಯ”!!!. ದುರಾದೃಷ್ಟವೋ ಏನೋ ಅಮಾಯಕ ಜೀವಗಳು ಇಳಿವಯಸ್ಸಿನಲ್ಲಿ ತಮ್ಮ ಬದುಕಿನ ಬೆಳಕನ್ನು ಕಾಣದೆ ಕಮರಿ ಹೋಗುತ್ತಿವೆ ಎಂದು ದುಃಖದಿಂದ ಹೇಳಿದ್ದಾರೆ.

ಇನ್ನು ಇಪಿಎಫ್ಒ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿ, ಅಕ್ಟೋಬರ್ 28, 2024 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮವನ್ನು ದೇಶಾದ್ಯಂತ ಇರುವ ಎಲ್ಲ ಪಿಎಫ್ ಕಚೇರಿ ಆವರಣದಲ್ಲಿ ನಡೆಸುತ್ತಿದ್ದು, ನಿವೃತ್ತರ ಎಲ್ಲ ಕುಂದುಕೊರತೆಗಳನ್ನು ಈಡೇರಿಸುತ್ತೇವೆ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಇದು ಪತ್ರಿಕಾ ಪ್ರಕಟಣೆಗಷ್ಟೆ ಸೀಮಿತವಾಗಿದೆಯೇ ವಿನಾ ಯಾವುದೇ ಪ್ರಯೋಜನವಾಗುತ್ತಿಲ್ಲ.

ನವೆಂಬರ್ 04, 2022 ರಂದು ಸರ್ವೋಚ್ಚ ನ್ಯಾಯಾಲಯವು ಇಪಿಎಸ್ ನಿವೃತ್ತರ ಪರ ನೀಡಿರುವ ತೀರ್ಪನ್ನು ಇನ್ನೂ ಜಾರಿ ಮಾಡದಿರುವುದೇ ಇದಕ್ಕೆ ತಾಜಾ ನಿದರ್ಶನವಾಗಿದೆ. ನಿವೃತ್ತರ ಪರ ನೀಡಿರುವ ತೀರ್ಪನ್ನು ಇನ್ನೂ ಏಕೆ ಜಾರಿ ಮಾಡಿಲ್ಲ? ಕನಿಷ್ಠ ಹೆಚ್ಚುವರಿ ಪಿಂಚಣಿ ಬೇಡಿಕೆಯನ್ನು ಕೇಂದ್ರ ಸಂಪುಟ ಸಭೆಯಲ್ಲಿ ಮಂಡಿಸಿ, ಬಗೆಹರಿಸಿಕೊಡುತ್ತೇವೆ ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರು ತಿಳಿಸಿ 6 ವಾರ ಕಳೆದರೂ ಇನ್ನೂ ಏಕೆ ಬಗೆಹರಿಸಿಲ್ಲ?

ಈ ಎಲ್ಲ ಪ್ರಶ್ನೆಗಳಿಗೆ ಇಪಿಎಫ್ಒ ಅಧಿಕಾರಿಗಳು ಉತ್ತರಿಸಬೇಕಾಗಿದೆ. ಏನೇ ಆಗಲಿ ಯಾರು ಧೃತಿಗೆಡದೆ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಮಧ್ಯ ಪ್ರದೇಶದ ಜಬ್ಬಾಲ್ಪುರ್ ಹಾಗೂ ಪ್ರಯಗ್‌ನ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯುತ್ತಿದ್ದು, ಇಪಿಎಸ್ ನಿವೃತ್ತರು ಜಾಗೃತರಾಗುತ್ತಿದ್ದಾರೆ.

ಹೀಗಾಗಿ ಅಕ್ಟೋಬರ್ 28ರ ನಮ್ಮ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ನಿವೃತ್ತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ (minister for labour & employment) ಸಚಿವ ಮನ್ಸೂಖ್ ಮಾಂಡವಿಯ ಅವರಿಗೆ ಉಲ್ಲೇಖಿಸಿರುವ 20ನೇ ಮನವಿ ಪತ್ರವನ್ನು ನೀಡಲಾಗುವುದು.

2014ಕ್ಕೆ ಮೊದಲು ಅಥವಾ ನಂತರ ನಿವೃತ್ತರಾದವರು ಎಂದು ತಾರತಮ್ಯ ಮಾಡದೆ ಎಲ್ಲ ನಿವೃತ್ತರಿಗೂ ನ್ಯಾಯ ಸಮ್ಮತ ಪಿಂಚಣಿ ನೀಡಬೇಕು. ನಮ್ಮ ಎಲ್ಲ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಉತ್ತರಿಸಬೇಕು!!!. ಆ ಉತ್ತರ ಪಡೆಯುವುದಕ್ಕೆ ಎಲ್ಲ ಇಪಿಎಸ್ ನಿವೃತ್ತರು ಎಚ್ಚೆತ್ತುಕೊಂಡು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯ ಸಂಯೋಜಕ ರಮಾಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಹಾಗೂ ನಮ್ಮ ಸಂಘದ ಮುಖಂಡರು, ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಪ್ರತಿಭಟನೆ ತಾವೆಲ್ಲರೂ ಬರಬೇಕು ಎಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ