NEWSಕೃಷಿನಮ್ಮಜಿಲ್ಲೆ

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ರೈತರು, ರೈತ ಮಹಿಳೆಯರ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರಿಗೆ ಕನಿಕರ ಬೇಕಾಗಿಲ್ಲ, ನೈಜ ಪರಿಹಾರ ಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದರು

ಇಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದ ರೈತರ ತಂಡ ಬೆಂಗಳೂರು ಚಲೋ ಮೂಲಕ ಸಾವಿರಾರು ಅನ್ನದಾತರೊಂದಿಗೆ ಫ್ರೀಡಂ ಪಾರ್ಕ್‌ನಲ್ಲಿ ಜಮಾವಣೆಗೊಂಡು ಪ್ರತಿಭಟನೆ ಆರಂಭಿಸಿದದ ವೇಳೆ ಮಾತನಾಡಿದರು.

ಹಳ್ಳಿಗಳಲ್ಲಿ ರೈತರು ಕೃಷಿ ತೊರೆದು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ, ಆತ್ಮಹತ್ಯೆಗಳ ಸರಣಿ ಹೆಚ್ಚುತ್ತಿದೆ, ಬರಗಾಲ ಕಾಡುತ್ತಿದೆ, ರೈತರ ಮಕ್ಕಳ ಮದುವೆಯಾಗಲು ಹೆಣ್ಣುಮಕ್ಕಳು ಒಪ್ಪುತ್ತಿಲ್ಲ, ಕೃಷಿ ದುರ್ಬಲವಾಗುತಿದೆ ಎಲ್ಲವನ್ನೂ ಪರಿಗಣಿಸಿ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಲೇಬೇಕು ಕಾಂಗ್ರೆಸ್‌ ಸರ್ಕಾರವೇ ತೆಲಂಗಾಣದಲ್ಲಿ ಮನ್ನ ಮಾಡಿಲ್ಲವೇ ಯಾಕೆ ಕರ್ನಾಟಕದಲ್ಲಿ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಕೇಂದ್ರ, ರಾಜ್ಯ, ಸರ್ಕಾರಗಳು ರಾಜ್ಯಕ್ಕೆ ಬಿಡುಗಡೆಯಾಗಬೇಕಾದ ಅನುದಾನ ಬಿಡುಗಡೆ ವಿಚಾರದಲ್ಲಿ ಕೆಸರೆರಾಚಾಟದಲ್ಲಿ ತೊಡಗಿವೆ. ರೈತರ ಬಗ್ಗೆ ಮೂಸಳೆ ಕಣ್ಣಿರು ಸುರಿಸುತಿವೆ. ಕಳೆದ ಹತ್ತು ವರ್ಷದಲ್ಲಿ ಕೃಷಿ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ, ಖರ್ಚು ಮಾಡಿರುವ ಅನುದಾನ ಎಷ್ಟು ಎಂಬುರ ಬಗ್ಗೆ ಎರಡೂ ಸರ್ಕಾರಗಳು ಶ್ವೇತಪತ್ರ ಬಿಡುಗಡೆ ಮಾಡಲಿ. ಆಗ ರೈತರಿಗೆ ನಿಜ ಬಣ್ಣ ಬಯಲಾಗುತ್ತದೆ ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಾಂಖಿಕ ಸಚಿವ ಡಿ.ಸುಧಾಕರ್ ಆಗಮಿಸಿ ಪ್ರತಿಭಟನಾಕಾರರ ಒತ್ತಾಯ ಪತ್ರ ಸ್ವೀಕರಿಸಿ ಮಾತನಾಡಿ, ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ ದೆಹಲಿಯಲ್ಲಿ ನಾಳೆ ಈ ಒತ್ತಾಯಗಳ ವಿಚಾರವನ್ನು ಅವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ ಅವರು, ಸಮಯವಕಾಶ ಸಿಕ್ಕರೆ ಮುಖಂಡರನ್ನು ಆಹ್ವಾನಿಸಿ ಚರ್ಚಿಸಲಾಗುವುದು ಎಂದರು.

ಗ್ರೀನ್ ಬರ್ಡ್ಸ್ ಠೇವಣಿದಾರರ ಹಣ ಕೊಡಿಸಲು ಎರಡು ದಿನದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಲಿದ್ದಾರೆ ಎಂದು ಭರವಸೆ ನೀಡಿದರು.

ಪ್ರತಿಭಟನೆ ವೇಳೆ ರೈತರ ಹೋರಾಟಕ್ಕೆ ಜಯವಾಗಲಿ, ಬೇಕೇ ಬೇಕು ನ್ಯಾಯ ಬೇಕು, ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.

ರಾಜ್ಯ ರೈತ ಸಂಘದ ನಾರಾಯಣ ರೆಡ್ಡಿ ಅತ್ತಹಳ್ಳಿ ದೇವರಾಜ್, ಬರಡನ್ಪುರ ನಾಗರಾಜ್, ನಾಗರಾಜ್, ಜಿ.ವಿ.ಲಕ್ಷ್ಮೀದೇವಿ, ಕಿರಗಸೂರ ಶಂಕರ, ಗುರುಸಿದ್ದಪ್ಪ, ದೇವ ಕುಮಾರ್, ಪರಶುರಾಮ್, ರವಿಕುಮಾರ್, ಧರ್ಮರಾಜ್ ಸಾವು, ರಮೇಶ್ ಉಗಾರ್, ಧರ್ಮರಾಜ್, ರೇವಣ್ಣ, ಸಾವಿರಾರು ರೈತರು, ರೈತ ಮಹಿಳೆಯರು ಗ್ರೀನ್ ಬರ್ಡ್ಸ್ ಠೇವಣಿ ವಂಚಿತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್‌ಡಿಕೆಗೆ ಜೆಡಿಎಸ್ ನಾಯಕರಿಂದ ಅದ್ದೂರಿ ಸ್ವಾಗತ ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ - ಜೂ.17ರಿಂದ ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ KSRTC: ಬಾನಂದೂರು - ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಸಂಬಂಧ ಕರೆದಿದ್ದ ಎಂಡಿಗಳ ಸಭೆ ಮುಂದೂಡಿಕೆ KSRTC- 3ನಿಗಮಗಳ 15 ಡಿಸಿಗಳ ವರ್ಗಾವಣೆ ಮಾಡಿ ಆದೇಶ: ಸಿಪಿಎಂ KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ KSRTC: ನಾಳೆಯಿಂದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜನ್ಮಸ್ಥಳ ಬಾನಂದೂರು- ಆದಿ ಚುಂಚನಗಿರಿಗೆ ನೇರ ಬಸ್ ಸೌಕರ್ಯ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಸಂಬಂಧ ಸಚಿವರ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ