NEWSನಮ್ಮಜಿಲ್ಲೆನಮ್ಮರಾಜ್ಯ

ದೇವದಾಸಿ ಮಹಿಳೆಯರ, ಮಕ್ಕಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ: ಎಎಪಿ ಬೆಂಬಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳ ಹಕ್ಕೊತ್ತಾಯಗಳಿಗಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮೂರು ದಿನಗಳ ಕಾಲ ಬಹೃತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಎಲ್ಲ ದೇವದಾಸಿಯರಿಗೆ ನೀಡುವ ಮಾಸಿಕ ಧನಸಹಾಯವನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಅವರ ಹೆಣ್ಣು ಮಕ್ಕಳಿಗೂ ಅದನ್ನು ವಿಸ್ತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಡಿಸೆಂಬರ್ 30ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹಗಳನ್ನು ಹಮ್ಮಿಕೊಂಡಿದ್ದಾರೆ.

ಇನ್ನು ಈ ಬೃಹತ್ ಪ್ರತಿಭಟನಾ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪ್ರತಿಭಟನಾನಿರತರನ್ನು ತಮ್ಮ ಪಕ್ಷದ ಬೆಂಬಲವಿರುವುದಾಗಿ ಘೋಷಿಸಿದರು. ಸ್ಥಳದಲ್ಲಿ ನೂರಾರು ದೇವದಾಸಿ ಮಹಿಳೆಯರು ಇದ್ದರು.

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಡಿಸೆಂಬರ್ 28, 29 ಮತ್ತು 30ರಂದು ಬೃಹತ್ ಪ್ರತಿಭಟನಾ ಧರಣಿ- ಸತ್ಯಾಗ್ರಹವನ್ನು ಹಮ್ಮಿಕೊಂಡಿವೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ