NEWSಶಿಕ್ಷಣ

ವಸತಿ ಶಾಲಾ- ಕಾಲೇಜುಗಳ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪ್ರವೇಶಕ್ಕೆ ಮೇ 20 ಕೊನೇ ದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: 2025-26ನೇ ಸಾಲಿನ ಪ್ರಥಮ ಪಿಯುಸಿ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಜಿಲ್ಲೆಯ ಎಲ್ಲ ವಸತಿ ಶಾಲಾ ಕಾಲೇಜುಗಳಲ್ಲಿ ಅರ್ಜಿಯನ್ನು ವಿತರಿಸಲಾಗುವುದು, ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿದೆ.

ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಜಡಿಗೇನಹಳ್ಳಿ, ಹೊಸಕೋಟೆ ತಾಲೂಕು. ಮುರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲೂಕು. ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಬೊಮ್ಮವಾರ, ದೇವನಹಳ್ಳಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಪದವಿಪೂರ್ವ ಕಾಲೇಜುಗಳಲ್ಲಿ ಕಲಿಯಲು ಈ ಅವಕಾಶ ಕಲ್ಪಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇಕಡ 75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ 25% ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ. ವಸತಿ ಶಾಲೆಗಳಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಶೇಕಡ 50% ರಷ್ಟು ಹಾಗೂ ಇತರೆ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಶೇಕಡ 50% ಮೀಸಲಿರಿಸಲಾಗಿದೆ.

ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಊಟ ಮತ್ತು ವಸತಿ, ಲೇಖನ ಸಾಮಗ್ರಿ, ಪಠ್ಯಪುಸ್ತಕ, ಶೂ ಸಾಕ್ಸ್, ಸಮವಸ್ತ್ರ, ಸಿ.ಇ.ಟಿ ನೀಟ್ ಮತ್ತು ಜೆ.ಇ.ಇ ಪರೀಕ್ಷೆಗಳಿಗೆ ತರಬೇತಿ ಹಾಗೂ ಇತರೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಕಿರಣ್ ಕುಮಾರ್ ಪ್ರಾಂಶುಪಾಲರು 9110256424, ನಾಗರತ್ನಮ್ಮ ಪಿ. ಪ್ರಾಂಶುಪಾಲರು 8105526933, ರೇಖಾ. ಎಸ್. ಪ್ರಾಂಶುಪಾಲರು 7349391473 ಹಾಗೂ ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ, 217. ಎರಡನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562110 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್.ಪ್ರೇಮ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ