Breaking NewsNEWSನಮ್ಮರಾಜ್ಯ

ಮೇ. 10ರಂದು ವಿಧಾನಸಭೆ ಚುನಾವಣೆ, 13ರಂದು ಫಲಿತಾಂಶ- ಇಂದಿನಿಂದಲೇ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿ

ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧಾರ : ರಾಜೀವ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ನಡೆಯಲಿದ್ದು, ಮೇ.13ರಂದು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್‌ ಕುಮಾರ್‌ ದಿನಾಂಕವನ್ನು ಪ್ರಕಟಿಸಿದರು.

ಬುಧವಾರ (ಮಾ.29) ಬೆಳಗ್ಗೆ 11.30 ಕೇಂದ್ರ ಚುನಾವಣಾ ಆಯೋಗ ರಾಷ್ಟ್ರ ರಾಜಧಾನಿ ದೆಹಲಿಯ ವಿಗ್ಯಾನ್‌ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲೂ ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.

ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.20ರಂದು  ನಾಮಪತ್ರ ಸಲ್ಲಿಸಲು ಕೊನೆಯದಿನವಾಗಿದೆ. ಏ.21ರಂದು ನಾಮಪತ್ರ ಪರಿಶೀಲನೆ.  ಏಪ್ರಿಲ್‌ 24 ನಾಮಪತ್ರ ವಾಪಸ್‌ ಪಡೆಯಲು ಕೊನೆಯದಿನವಾಗಿದೆ.

ಇನ್ನು ರಾಜ್ಯದಲ್ಲಿ ಒಟ್ಟು 5.22 ಕೋಟಿ ಮತದಾರರಿದ್ದಾರೆ. ಅವರಲ್ಲಿ ಮಹಿಳೆಯರು 2.59 ಕೋಟಿ ಇದ್ದಾರೆ. 2.62 ಕೋಟಿ ಪುರುಷ ಮತದಾರರು ಇದ್ದಾರಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

2.59 ಕೋಟಿ (2,59,26,319) ಮಹಿಳೆಯರು. 12.15 ಲಕ್ಷ ಯುವ ಮತದಾರರು. 2.62 ಕೋಟಿ ಪುರುಷ ಮತದಾರರು. 4,756 ತೃತೀಯ ಲಿಂಗಿ ಮತದಾರರು ಮತ್ತು 5.55 ಲಕ್ಷ ಅಂಗವಿಕಲ ಮತದಾರರಿದ್ದಾರೆ.

18-19 ವಯಸ್ಸಿನ ಅಂತರದಲ್ಲಿರುವ ಯುವ ಮತದಾರರ ಸಂಖ್ಯೆ 9.17 ಲಕ್ಷ (9,17,241) ಇದೆ. ಒಟ್ಟು 58,282 ಮತಗಟ್ಟೆಗಳು. ಒಂದೊಂದು ಮತಗಟ್ಟೆಗಳಿಗೆ 883 ಮತದಾರರಂತೆ ವಿಂಗಡಣೆ ಮಾಡಲಾಗಿದೆ.

ಇನ್ನು ನಗರ ಪ್ರದೇಶದಲ್ಲಿ 24063 ಮತಗಟ್ಟೆಗಳು. 34219 ಗ್ರಾಮೀಣ ಭಾಗದಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 224 ವಿಧಾನಸಭಾ ಕೇತ್ರಗಳಲ್ಲೂ ತಲಾ ಒಂದೊಂದು ಯುವ ಮತಗಟ್ಟೆಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ವಿವರಿಸಿದರು.

ಅಭ್ಯರ್ಥಿಗಳ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯ: ಅಭ್ಯರ್ಥಿಗಳ ಮಾಹಿತಿ, ಪ್ರಮಾಣ ಪತ್ರ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಜನರು ತಮ್ಮ ಅಭ್ಯರ್ಥಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಅಫಿಡೆವಿಟ್ APPನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್ ಸಹಾಯದಿಂದ ಚುನಾವಣಾ ಅಕ್ರಮಗಳನ್ನು ಜನರು ದೂರು ನೀಡಬಹುದು.

ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದರು.

ರಾಜೀವ್ ಕುಮಾರ್ ಜತೆಗೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್, ಅನುಪ್ ಚಂದ್ರ ಪಾಂಡೆ, ನಿತೇಶ್ ವೈಷ್ಯ, ಧರ್ಮೇಂದ್ರ ಶರ್ಮಾ ಮತ್ತಿತರರು ಭಾಗಿಯಾಗಿದ್ದಾರೆ.

Press Note for General Election to Karnataka-Final

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ