NEWSನಮ್ಮರಾಜ್ಯ

ಹೊಸ ವರ್ಷ ರಾಜ್ಯಕ್ಕೆ ಸಮೃದ್ಧಿ, ಜನತೆ ಸುಖ, ಶಾಂತಿ, ಬಡವರು-ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ: ಸಿಎಂ ಹಾರೈಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

2026ರ ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲಿಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ ಎಂದರು.

ಇನ್ನು ಉತ್ತಮ ಮಳೆ – ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025ರಲ್ಲಿ ಭಾರೀ ಮಳೆಯಾದ ಜತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್‌ಡಿಆರ್‌ಎಪ್‌ನಿಂದ ಹಾಗೂ ರಾಜ್ಯ ಸರ್ಕಾರ ಎನ್‌ಡಿಆರ್‌ಎಪ್‌ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ. ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಹೇಳಿದರು.

ವಿಪಕ್ಷಗಳ ನಾಯಕರು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ ಎಂದರು.

ಇನ್ನು ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು ಎಂದರು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಕರೆ ನೀಡಿದರು.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!