NEWSನಮ್ಮಜಿಲ್ಲೆರಾಜಕೀಯ

ಎಂಸಿಡಿ ಫಲಿತಾಂಶ, ರಾಷ್ಟ್ರೀಯ ಪಕ್ಷ ಸ್ಥಾನಮಾನ: ಮೈಸೂರಿನಲ್ಲಿ ಎಎಪಿ ಸಂಭ್ರಮಾಚರಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯಲ್ಲಿ ಉತ್ತಮ ಬಹುಮತದಿಂದ ಜಯ ಗಳಿಸಿರುವುದು ಹಾಗೂ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ಗಳಿಸಿದ್ದಕ್ಕೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಎಲ್ಲೆಲ್ಲಿ ಆಮ್‌ ಆದ್ಮಿ ಪಾರ್ಟಿ ಆಡಳಿತವಿರುತ್ತದೆಯೋ ಅಲ್ಲೆಲ್ಲ ಜನಸಾಮಾನ್ಯರ ಜೀವನದಲ್ಲಿ ಬೆಳಕಿರುತ್ತದೆ. ಅದರ ಸಂಕೇತವಾಗಿ ದೀಪ ಬೆಳಗಿ ಸಿಹಿ ಹಂಚುವ ಮೂಲಕ ಹೆಬ್ಬಾಳ ಹಾಗೂ ಮಂಡಿ ಮೊಹಲ್ಲಾದ ಕಚೇರಿಗಳಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮೈಸೂರಿನ ಹೆಬ್ಬಾಳದಲ್ಲಿರುವ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಲವಿಕ ಗುಬ್ಬಿವಾಣಿ, “ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸರ್ಕಾರದ ಸಾಧನೆಗಳನ್ನು ದೆಹಲಿಯ ಜನತೆ ಕಣ್ಣಾರೆ ಕಂಡಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಅಭಿವೃದ್ಧಿ ಕಾರ್ಯಗಳ ಗುಣಮಟ್ಟ ಹೇಗಿರುತ್ತದೆ, ಪಕ್ಷವು ಪಾರದರ್ಶಕ ಆಡಳಿತಕ್ಕೆ ಎಷ್ಟು ಆದ್ಯತೆ ನೀಡುತ್ತದೆ, ಜನರ ಭಾವನೆಗೆ ಹೇಗೆ ಸ್ಪಂದಿಸುತ್ತದೆ ಎಂಬ ಸ್ಪಷ್ಟ ಅರಿವು ಅಲ್ಲಿನ ಜನರಿಗಿದೆ. ಆದ್ದರಿಂದ ಆಮ್‌ ಆದ್ಮಿ ಪಾರ್ಟಿಗೆ 134 ಸ್ಥಾನಗಳೊಂದಿಗೆ ಆಶೀರ್ವದಿಸಿದ್ದಾರೆ ಎಂದು ಹೇಳಿದರು.

ಹಣಬಲ, ತೋಳ್ಬಲದ ನಡುವೆಯೂ ಆಮ್‌ ಆದ್ಮಿ ಪಾರ್ಟಿ ಶಕ್ತಿ ಪ್ರದರ್ಶಿಸಿದೆ. ಕೇವಲ ಹತ್ತು ವರ್ಷಗಳಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ, ಚುನಾವಣಾ ಆಯೋಗ ನಿಗದಿ ಪಡಿಸಿದ ಸಾಧನೆ ತೋರಿಸುವ ಮೂಲಕ ಆಮ್‌ ಆದ್ಮಿ ಪಾರ್ಟಿಯು ʻರಾಷ್ಟ್ರೀಯ ಪಕ್ಷʼ ಸ್ಥಾನಮಾನ ಪಡೆದಿದೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ರವರು ಆಡಳಿತದಲ್ಲಿ ತೆಗೆದುಕೊಂಡ ಕ್ರಾಂತಿಕಾರಿ ಹಾಗೂ ಪ್ರಾಮಾಣಿಕ ನಿಲುವುಗಳಿಂದಾಗಿ ಈ ಮಟ್ಟಿನ ಯಶಸ್ಸು ದೊರೆತಿದೆ ಎಂದು ಮಾಲವಿಕ ಗುಬ್ಬಿವಾಣಿ ಹೇಳಿದರು.

ಕರ್ನಾಟಕದಲ್ಲೂ ಎಎಪಿ ಅಧಿಕಾರಕ್ಕೆ ಬಂದು ಜನಸಾಮಾನ್ಯರ ಭಾವನೆಗಳಿಗೆ ಬೆಲೆ ಸಿಗುವ ಕಾಲ ದೂರವಿಲ್ಲ. ದೆಹಲಿ ಸರ್ಕಾರದ ನೂರಾರು ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಮೂಲಕ ನಾವೆಲ್ಲ ಶೀಘ್ರವೇ ಎಎಪಿಯನ್ನು ಅಧಿಕಾರಕ್ಕೆ ತರಬೇಕು” ಎಂದು ಈ ಸಂಧರ್ಭದಲ್ಲಿ ಮುಖಂಡರಾದ ಮುಜಾಹಿದ್‌ ಖಾನ್ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಉಷಾ ಸಂಪತ್‌ಕುಮಾರ್‌, ಶಿವಕುಮಾರ್‌, ರಂಗಯ್ಯ, ಇರ್ಫಾನ್‌ ರಜಾಕ್‌, ಹರ್ಷ, ದೀಪಕ್‌, ಮುಜಾಹಿದ್‌, ಮುಕರಾಮ್‌, ನಾಸಿರ್‌ ಖಾನ್‌, ಟಿ.ಎನ್.ನಾಗರಾಜ್‌, ವಿಶ್ವನಾಥ್‌ ಕುಲಕರ್ಣಿ, ವಾಸೀಕ್‌, ಸರ್ದಾರ್‌, ಆಭಿಷೇಕ್ ಮತ್ತಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...