ಬೆಂಗಳೂರು: 6ನೇ ವೇತನ ಆಯೋಗ ಜಾರಿ ಮಾಡುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ)ದ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಏಳನೇ ದಿನ ಯಶಸ್ವಿಯಾಗಿ ಪೂರೈಸಿ ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.
ಸಾರಿಗೆ ನೌಕರರ ಮುಷ್ಕರ ಆರಂಭವಾಗಿ 7 ದಿನ ಕಳೆದು 8ನೇ ದಿನಕ್ಕೆ ಕಾಲಿಟ್ಟರು ಸರ್ಕಾರ ಇದಕ್ಕೂ ತಮಗೂ ಸಂಬಂಧವಿಲ್ಲ ಎಂಬುಂತೆ ವರ್ತಿಸುತ್ತಿದೆ. ಇದರಿಂದ ನೌಕರರ ಹೋರಾಟ ದಿನದಿಂದ ದಿನಕ್ಕೆ ಮತ್ತಷ್ಟು ಶಕ್ತಿಯುತವಾಗುತ್ತಿದ್ದು, ಹಲವಾರು ಕನ್ನಡ ಪರ, ದಲಿತಪರ, ಕಾರ್ಮಿಕ ಪರ ಸಂಘಟನೆಗಳು ಬೆಂಬಲಕ್ಕೆ ಬರುತ್ತಿವೆ.
ಹೀಗಾಗಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ತಮ್ಮ ನೌಕರರಿಗೆ ಒಂದು ಸಂದೇಶ ರವಾನಿಸಿದ್ದು, ಆತ್ಮೀಯ ಸಾರಿಗೆ ಸಹೋದರರೇ ಏಳನೇ ದಿನದ ಮುಷ್ಕರವನ್ನು ಯಶಸ್ವಿಗೊಳಿಸಿದ್ದಕ್ಕೆ ಧನ್ಯವಾದಗಳನ್ನು ಸಮರ್ಪಿಸುತ್ತಿದ್ದೇವೆ.
ಸ್ನೇಹಿತರೆ ಏ.14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130 ನೇ ಜಯಂತೋತ್ಸವ ಇರುವ ಕಾರಣ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಬಸ್ ನಿಲ್ದಾಣಗಳಲ್ಲಿ ಅಂಬೇಡ್ಕರ್ ಅವರ ಫೋಟೋ ಇಟ್ಟು ಪೂಜೆ ಸಲ್ಲಿಸಿ, ಸಾರಿಗೆ ನೌಕರರು ಮತ್ತು ಅವರ ಕುಟುಂಬ ವರ್ಗದವರು ಅಂಬೇಡ್ಕರ್ ಜಯಂತಿ ಆಚರಿಸುವ ಮೂಲಕ ಬಾಬಾ ಸಾಹೇಬರು ಬರೆದಿರುವ ಸಂವಿಧಾನದ ಹಕ್ಕುಗಳ ಹಾಗೂ ಪ್ರಜಾಪ್ರಭುತ್ವ ದಮನ ಮಾಡುತ್ತಿರುವ ಸರ್ಕಾರದ ವಿರುದ್ಧ ಕೊರೊನಾ ನಿಯಮಗಳನ್ನು ಪಾಲಿಸುವ ಮೂಲಕ ಶಾಂತಿಯುತ ಮುಷ್ಕರ ಮಾಡಿ ಎಂದು ಮನವಿ ಮಾಡಿದೆ.
ಇನ್ನು ಏ.13ರಂದು ಸುಮಾರು 1.37 ಲಕ್ಷ ಕಾರ್ಮಿಕರ ಪೈಕಿ ಬಹುತೇಕರು ಕೆಲಸದಿಂದ ದೂರ ಉಳಿದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೆಲ ನೌಕರರು ಕೆಲಸವಿಲ್ಲದೇ ವೇತನವಿಲ್ಲ ಎಂಬ ಬೆದರಿಕೆ ನಡುವೆ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರನೇ ವೇತನ ಆಯೋಗದ ವರದಿಯನ್ನು ಸರ್ಕಾರಿ ನೌಕರರಿಗೆ ಸಮನಾಗಿ ಜಾರಿಗೆ ತರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿ ನೌಕರರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು. ಅವರ ಎಚ್ಚರಿಕೆಗೆ ಯಾವುದೇ ನೌಕಲರ ಮಣಿದಿಲ್ಲ ಎಂದು ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ
ಮುಷ್ಕರ ನಡೆಸುತ್ತಿರುವ ಸಹೋದ್ಯೋಗಿಗಳ ಬೆದರಿಕೆ ನಡುವೆಯೂ ಕೆಲಸಕ್ಕೆ ಮರಳಿದ ನೌಕರರಿಗೆ ಸೋಮವಾರ ಮಾರ್ಚ್ ವೇತನವನ್ನು ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರಿಂದ ಕಲವರು ಹಾಜರಾಗಿದ್ದು ಅವರಿಗೆ ವೇತನ ಬೀಡುಗಡೆ ಮಾಡಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಸಮನಾಗಿ ಸಂಬಳ ಕೋರಿ ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ), ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಇಕೆಆರ್ ಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ ಟಿಸಿ) ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ)ದ ನೌಕರರು ಮುಷ್ಕರ ನಡೆಸುತ್ತಿದ್ದು. ಈ ನಾಲ್ಕೂ ನಿಗಮಗಳು 26,000 ಬಸ್ ಗಳನ್ನು ಹೊಂದಿವೆ. 6,000ಕ್ಕೂ ಹೆಚ್ಚು ಬಸ್ ಗಳನ್ನು ಹೊಂದಿರುವ ಬಿಎಂಟಿಸಿಯನ್ನು ಬೆಂಗಳೂರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಜೀವನಾಡಿ ಎಂದು ಪರಿಗಣಿಸಲಾಗಿದೆ.
ನಿಗಮಗಳು ಮತ್ತು ಸರ್ಕಾರದ ನಡುವಿನ ಬಿಕ್ಕಟ್ಟು ಬಗೆಹರಿಯದಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಮಂಗಳವಾರ ಯುಗಾದಿ ಆಚರಿಸಲು ತಮ್ಮ ಸ್ವಂತ ಸ್ಥಳಗಳಿಗೆ ಪ್ರಯಾಣಿಸಲು ಜನರು ಅನನುಕೂಲತೆ ಎದುರಿಸಿದ್ದಾರೆ. ಅಧಿಕಾರಿಗಳು ಮ್ಯಾಕ್ಸಿ ಕ್ಯಾಬ್ ಗಳು, ಖಾಸಗಿ ಬಸ್ ಗಳು, ಮಿನಿ ಬಸ್ ಗಳು ಮತ್ತು ಇತರ ಪ್ರಯಾಣಿಕರ ಸಾರಿಗೆ ವಾಹನಗಳಿಗೆ ಅವಕಾಶ ನೀಡಿದ್ದಾರೆ.
ಹಾಸನ ಡಿಪೋ ಚಾಲಕ ಫಾಲಾಕ್ಷ ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಆತನನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತನೆಗೆ ಸಾವಿನ ಬಗ್ಗೆ ಭಯವಿಲ್ಲ. ಆದರೆ, ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಸ್ಪತ್ರೆಗೆ ಸಾಗಿಸುವ ವೇಳೆ ಮಾಧ್ಯಮಗಳಿಗೆ ಆತ ತಿಳಿಸಿದ್ದಾನೆ.
ಹಾಸನದಲ್ಲಿ ಪ್ರತಿಭಟನೆ ನಡೆಸಿದ ಮೂವರು ನೌಕರರ ವಿರುದ್ಧ ಕೆಎಸ್ ಆರ್ ಟಿಸಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ನಿಗಮದ ವಿರುದ್ಧ ಪ್ರತಿಭಟನೆಗಳನ್ನು ಪ್ರಚೋದಿಸಿದ ಆರೋಪ ಅವರ ಮೇಲಿದೆ.
ಈ ಮಧ್ಯೆ, ಕೆಎಸ್ ಆರ್ ಟಿಸಿ ಕಾರ್ಮಿಕರ ಒಕ್ಕೂಟದ ಗೌರವಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನೌಕರರು ಕಾನೂನಿನಡಿಯಲ್ಲಿ ನಿಷೇಧಿಸಲ್ಪಟ್ಟಿದ್ದರೂ ಸಹ ಯುಗಾದಿ ಹಬ್ಬದ ದಿನದಂದು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹಬ್ಬದ ಮುನ್ನಾದಿನದಂದು ವೇತನ ಪಾವತಿಸದೆ ನೌಕರರಿಗೆ ಅನ್ಯಾಯ ಮಾಡಲಾಗಿದೆ. ಸರ್ಕಾರ, ನೌಕರರ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಸರ್ಕಾರ, ತನ್ನ ನಿಲುವು ಸಡಿಲಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಮುಷ್ಕರ ತೀವ್ರ ಸ್ವರೂಪ ಪಡೆಯಲಿದೆ ಎಂದು ಹೇಳಿದ್ದಾರೆ.
ಮಾರ್ಚ್ ವೇತನವನ್ನು ತಡೆಹಿಡಿದಿರುವ ಕಾರಣಕ್ಕಾಗಿ ಡಿಪೋ ವ್ಯವಸ್ಥಾಪಕರ ವಿರುದ್ಧ ಈಗಾಗಲೇ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತಿದೆ. ಸರ್ಕಾರ ನೌಕರರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದೆ ಆದರೆ ನೌಕರರು ಈ ರೀತಿಯ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಖಡಕ್ ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲೆ ಮತ್ತು ಇತರ ಭಾಗಗಳಲ್ಲಿನ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ವರದಿಗಳು ನಿರಾಧಾರ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದ ಹೊರತು ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ.
ಈ ನಡುವೆ ಒಬ್ಬ ನಿರ್ವಾಹಕಿ ಸೇರಿದಂತೆ ಐವರು ಮಹಿಳೆಯರನ್ನು ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬಂಧಿಸಿದ್ದು, ಏ.24ರವರೆಗೂ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...