Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ

KSRTC MD ಅನ್ಬುಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣವನ್ನು ಇಂದಿನಿಂದಲೇ ಪಾವತಿಸುವಂತೆ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇಂದು ಡಿ.21ರಂದು ನಾಲ್ಕೂ ನಿಗಮದ ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲ ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ, ಎಲ್ಲ ಕಾರ್ಯ ನಿರ್ವಾಹಕ ಅಭಿಯಂತರರಿಗೂ ಸೂಚನೆ ನೀಡಿದ್ದಾರೆ.

01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನ ನಿಗದಿಯನ್ವಯ, ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ ವ್ಯತ್ಯಾಸಗಳನ್ನು ಲೆಕ್ಕಾಚಾರಗೊಳಿಸಿ. ಪಾವತಿಸಬೇಕಾದ ನಿವ್ವಳ ಮೊತ್ತದ ಕೈಮ್‌ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಆದೇಶ ನೀಡಲಾಗಿತ್ತು.

ಮುಂದುವರೆದು ಈ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ ವ್ಯತ್ಯಾಸದ ಮೊತ್ತವನ್ನು 21.12.2024 ರಿಂದ ಪಾವತಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಂಡಿ ಸೂಚಿಸಿದ್ದಾರೆ.

2020ರ ಜನವರಿ 1ರಿಂದ ಅನ್ವಯವಾಗುವಂತೆ ಮಾರ್ಚ್‌ 2023ರಲ್ಲಿ  ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳ ಹಿಂಬಾಕಿ ಕೊಡುವ ಬಗ್ಗೆಯೂ ಕ್ರಮ ತೆಗೆದುಕೊಂಡು   ಕೂಡಲೇ ಬಿಡುಗಡೆ ಮಾಡಬೇಕು ಎಂದು ನಿವೃತ್ತ ನೌಕರರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ