NEWSನಮ್ಮರಾಜ್ಯ

KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವೇತನ ಈ ಬಾರಿ ಏ.30ಕ್ಕೆ ಆಗಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ತಿಳಿಸಿದ್ದಾರೆ.

ಈ ಸಂಬಂಧ ನಿಗಮದ ಎಲ್ಲ, ಡಿಸಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ/ ಎಲ್ಲ ಕಾರ್ಯ ನಿರ್ವಾಹಕ ಅಭಿಯಂತರರಿಗೆ ಸೂಚನೆ ನೀಡಿದ್ದು, ಏಪ್ರಿಲ್-2026 ರ ಮಾಹೆಯ ವೇತನ ಏ.30ರಂತೆ ಪಾವತಿಸಲು ಆದೇಶ ನೀಡಿದ್ದಾರೆ.

ಸಂಸ್ಥೆಯ ಎಲ್ಲ ಅಧಿಕಾರಿ/ ನೌಕರರ ವೇತನವನ್ನು ಪ್ರತಿ ತಿಂಗಳು 1ನೇ ತಾರೀಖಿನಂದು ಪಾವತಿ ಮಾಡಲಾಗುತ್ತಿತ್ತು. ಆದರೆ 01.05.2026 ರಂದು ಬ್ಯಾಂಕ್ ರಜೆಯಿದ್ದು ಹಾಗೂ ಕಾರ್ಮಿಕ ದಿನಾಚರಣೆ ಇದೆ.

ಹೀಗಾಗಿ  ನಿಗಮದ ಎಲ್ಲ ಅಧಿಕಾರಿ/ ಸಿಬ್ಬಂದಿಗಳಿಗೆ ಏಪ್ರಿಲ್-2026 ರ ಮಾಹೆಯ ವೇತನವನ್ನು 30.04.2026 ರಂದು ಪಾವತಿಸಲು ನಿರ್ಧರಿಸಲಾಗಿದ್ದು, ಈ ದಿನದಂದು ನೌಕರರ ಬ್ಯಾಂಕ್ ಖಾತೆಗೆ ಜಮೆಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!