NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಘಟಗಿ ಘಟಕ ಹಾಗೂ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಪ್ರಿಯಾಂಗಾ ಬಸ್‌ಗಳನ್ನು ತಾಂತ್ರಿಕವಾಗಿ ಸುಸ್ಥಿತಿಯಲ್ಲಿಟ್ಟುಕೊಂಡು ಸಾರ್ವಜನಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೇವೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯಭಾರ ವಹಿಸಿಕೊಂಡ ಮೇಲೆ ಸಂಸ್ಥೆಯ ನೌಕರರ ಹಾಗೂ ಸಾರ್ವಜನಿಕರ ಅನುಕೂಲತೆಯ ಬಗ್ಗೆ ಎಂಡಿ ಪ್ರಿಯಾಂಗಾ ಅವರು ಹೆಚ್ಚಿನ ಗಮನ ನೀಡುತ್ತಿದ್ದಾರೆ.

ಮಂಗಳವಾರ (ನ.5) ಘಟಕಕ್ಕೆ ಭೇಡಿ ನೀಡಿದ ಎಂಡಿ ನೌಕರರ ಸಮಸ್ಯೆ ಹಾಗೂ ವಾಹನಗಳಲ್ಲಿ ತಾಂತ್ರಿಕ ದೋಷ ಮತ್ತಿತರ ಬಿಡಿಭಾಗಗಳ ಬಗ್ಗೆ ಮಾಹಿತಿ ಕಲೆಹಾಕಿದರು. ಜತೆಗೆ ನೌಕರರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವೇತನ ಹೆಚ್ಚಳ ಸಂಬಂಧ ಸರ್ಕಾರ ತಳೆದಿರುವ ಧೋರಣೆ ಬಗ್ಗೆ ನೌಕರರು ತಮ್ಮ ಅಧಿಕಾರಿಯ ಮುಂದೆ ಅಸಮಾಧಾನ ತೋಡಿಕೊಂಡರು.

ಈ ವೇಳೆ ಮಾತನಾಡಿದ ಅವರು, ಘಟಕಗಳಲ್ಲಿ ಸಿಬ್ಬಂದಿಗಳಿಗೆ ಅದರಲ್ಲೂ ಒತ್ತಡದಲ್ಲಿ ಕೆಲಸ ಮಾಡುವ ಚಾಲನಾ ಸಿಬ್ಬಂದಿಗಳ ಬಗ್ಗೆ ಪ್ರತಿ ಅಧಿಕಾರಿಯೂ ಕಾಳಜಿ ತೆಗೆದುಕೊಳ್ಳಬೇಕು. ಈ ಮೂಲಕ ಅವರಲ್ಲಿ ಡ್ಯೂಟಿ ಮಾಡುವ ಚೇತನ್ಯವನ್ನು ಹೆಚ್ಚಿಸಬೇಕು ಎಂದು ಡಿಪೋ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ನಿಗಮಕ್ಕೆ 799 ಹೊಸ ಬಸ್‌ಗಳ ಸೇರ್ಪಯಾಗುತ್ತಿದ್ದು, 2023-24 ನೇ ಸಾಲಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಯಿಂದ 20 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 675 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳು ಹೀಗೆ ಒಟ್ಟು 799 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಈ ಪೈಕಿ ಈಗಾಗಲೇ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 236 BS-6 ಮಾದರಿಯ ಗ್ರಾಮಾಂತರ ನೂತನ ಬಸ್ಸುಗಳು ರಸ್ತೆಗಿಳಿದಿದ್ದು ಸಾರ್ವಜನಿಕ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿವೆ. ಉಳಿದಂತೆ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 439 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳ ಕೂಡ ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದರು.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ