NEWSನಮ್ಮಜಿಲ್ಲೆನಮ್ಮರಾಜ್ಯ

BMTC ನಿಗಮದ ಬಸ್‌ ಉಳಿಸಿದ ಚಾಲಕ ಗೌರೀಶ್‌ಗೆ ₹10 ಸಾವಿರ ಬಹುಮಾನ ನೀಡಿ ಸನ್ಮಾನಿಸಿದ ಎಂಡಿ ಸತ್ಯವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಘಟಕ-26ರ ಚಾಲಕನ ಧೈರ್ಯವನ್ನು ಮೆಚ್ಚಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನಗದು ಬಹುಮಾನ ಮತ್ತು ಪ್ರಶಂಸನ ಪತ್ರ ನೀಡಿ ಗೌರವಿಸಿದ್ದಾರೆ.

ನಿನ್ನೆ ಡಿ.4ರ ಸೋಮವಾರ ಬೆಳಗ್ಗೆ 9ಗಂಟೆ ಸುಮಾರಿನಲ್ಲಿ ಘಟಕದ ವಾಹನಕ್ಕೆ ಹಿಂದಿನಿಂದ ಬಂದ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ. ಬಸ್ಸಿನ ಕೆಳಭಾಗದಲ್ಲಿ ಸಿಕ್ಕಿಕೊಂಡು ಘರ್ಷಣೆಯಿಂದ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ಕಾರಿನಿಂದ ಬಸ್ಸನ್ನು ಬೇರ್ಪಡಿಸಲು ಚಾಲಕ ಗೌರೀಶ್ ಪ್ರಾಣದ ಹಂಗುತೊರೆದು ಬಸ್‌ ಚಾಲನೆ ಮಾಡಿ ಬಸ್ಸನ್ನು ರಕ್ಷಿಸಿದ್ದರು.

ಗೌರೀಶ್‌ ಅವರು ಧೈರ್ಯದಿಂದ ಎದೆಗುಂದದೆ ಸಮಯ ಪ್ರಜ್ಞೆ ಮೆರೆದು ನಿಗಮದ ಆಸ್ತಿಯನ್ನು ರಕ್ಷಿಸಿ ಲಕ್ಷಾಂತರ ರೂ.ಗಳನ್ನು ಉಳಿಸುವ ಜತೆಗೆ ಭಾರಿ ಅನಾಹುತವನ್ನು ತಪ್ಪಿಸಿದ್ದರು. ಹೀಗಾಗಿ ಅವರ ಧೈರ್ಯವನ್ನು ಮೆಚ್ಚಿ ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಅವರಿಗೆ 10 ಸಾವಿರ ರೂಪಾಯಿ ನಗದು ಬಹುಮಾನದ ಜತೆಗೆ ಪ್ರಶಂಸನ ಪತ್ರನೀಡಿ ಸನ್ಮಾನಿಸಿದರು.

ಚಾಲಕ ಗೌರೀಶ್ ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಇನ್ನು ನಿಗಮದ ಎಂಡಿ ಜಿ.ಸತ್ಯವತಿ ಅವರು ಕೂಡ ಚಾಲಕನ ಉತ್ತಮ ಸೇವೆಯನ್ನು ಶ್ಲಾಘಿಸಿದ್ದು ಇದು ಇತರರಿಗೂ ಮಾದರಿಯಾಗಬೇಕು ಎಂದು ಉದ್ದೇಶದಿಂದ ಗೌರೀಶ್‌ ಅವರ ಧೈರ್ಯ ಮೆಚ್ಚಿ ನಗದು ಬಹುಮಾನದ ಜತೆಗೆ ಪ್ರಶಂಸನ ಪತ್ರ ನೀಡಿ ಅಭಿನಂದಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ