Breaking NewsNEWSದೇಶ-ವಿದೇಶ

ಸರ್ಕಾರ ಟೀಕಿಸಿದ ಮಾತ್ರಕ್ಕೆ ಮಾಧ್ಯಮಗಳ ನಿಯಂತ್ರಿಸಲು ಸಾಧ್ಯವಿಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಮಲಯಾಳಂ ಸುದ್ದಿ ವಾಹಿನಿಯ ಮೇಲೆ  ಕೇಂದ್ರ ನಿರ್ಬಂಧಿಸಿದ್ದನ್ನು ತೆಗೆದುಹಾಕಿದೆ.

ಸರ್ಕಾರದ ನೀತಿ, ಕಾರ್ಯಗಳ ವಿಚಾರವಾಗಿ ಮೀಡಿಯಾ ಒನ್‌ ಸುದ್ದಿ ವಾಹಿನಿ ಮಾಡಿರುವ ಟೀಕೆಗಳನ್ನು ರಾಷ್ಟ್ರವಿರೋಧಿ ಎಂದು ಅರ್ಥೈಸಲಾಗುವುದಿಲ್ಲ. ಉತ್ತಮ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಪತ್ರಿಕಾ ವ್ಯವಸ್ಥೆ ಅಗತ್ಯ ಎಂದು ನ್ಯಾಯಾಲಯ ತಿಳಿಸಿದೆ.

ಭದ್ರತಾ ಅನುಮತಿಯ ಕೊರತೆಯಿಂದಾಗಿ ಚಾನೆಲ್‌ನ ಪ್ರಸಾರ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರಾಷ್ಟ್ರೀಯ ಭದ್ರತಾ ಹಕ್ಕುಗಳನ್ನು ಗಾಳಿಗೆ ತೂರಿದ್ದಕ್ಕಾಗಿ ಗೃಹ ಸಚಿವಾಲಯವನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

2020 ರಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳು ಮತ್ತು ಗಲಭೆಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ ಕೆಲವೇ ಚಾನೆಲ್‌ಗಳಲ್ಲಿ ಒಂದಾಗಿರುವ ಮೀಡಿಯಾ ಒನ್‌ನಲ್ಲಿ ಪ್ರಸಾರಕ್ಕೆ ನಿಷೇಧ ಹೇರುವ ನಿರ್ಧಾರವನ್ನು ಸಮರ್ಥಿಸಲು ಯಾವುದೇ ಪುರಾವೆಗಳಿಲ್ಲ.

ಅಲ್ಲದೆ, ಸಮರ್ಪಕ ಸಾಕ್ಷ್ಯ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಭಯೋತ್ಪಾದಕರ ಸಂಪರ್ಕದಲ್ಲಿದ್ದಾರೆ ಎನ್ನುವುದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ಎಂದು ಪ್ರತಿಪಾದಿಸುವುದು ಸರಿಯಲ್ಲ ಎಂದು ಕೋರ್ಟ್‌ ತಿಳಿಸಿದೆ.

ದೆಹಲಿಯಲ್ಲಿ ನಡೆದಿದ್ದ ಸಂಘರ್ಷದ ಬಗ್ಗೆ ಕೋಮು ಸಾಮರಸ್ಯ ಕೆಡಿಸುವ ವರದಿ ಮಾಡಲಾಗಿದೆ ಎಂದು ಆರೋಪಿಸಿ ಮಲಯಾಳಂ ಸುದ್ದಿ ವಾಹಿನಿಗೆ ಕೇಂದ್ರ ಸರ್ಕಾರ ನಿರ್ಬಂಧವನ್ನು ವಿಧಿಸಿತ್ತು.

Leave a Reply

error: Content is protected !!
LATEST
ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ