ಸೆ.4ರಂದು ಸರ್ವ ಸಾರಿಗೆ ಸಂಘಟನೆಗಳ ಸಭೆ: ನೌಕರರ ಸಮಸ್ಯೆ ನೀಗಿಸಲು ಒಗ್ಗೂಡುತ್ತಿವೆಯೇ ಸಂಘಟನೆಗಳು?

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆದು 5ತಿಂಗಳುಗಳಾದರೂ ಆ ವೇಳೆ ನೌಕರರಿಗೆ ಅಗಿರುವ ತೊಂದರೆ ಸರಿಪಡಿಸಲು ಇನ್ನೂ ವಿಳಂಬವಾಗುತ್ತಿದೆ. ಹೀಗಾಗಿ ಸಂಸ್ಥೆಯ ಎಲ್ಲ ಸಂಘಟನೆಗಳ ಮುಖಂಡರು ಸೆ.4ರಂದು ಒಗ್ಗೂಡುತ್ತಿದ್ದಾರೆ ಎಂಬ ಬಗ್ಗೆ ಬಲ್ಲ ಮೂಲಗಳು ಸ್ಪಷ್ಟಪಡಿಸಿವೆ.
ಸಾರಿಗೆಯ ನಾಲ್ಕೂ ನಿಗಮದ ಸಮಸ್ತ ನೌಕರರು ಒಗ್ಗೂಡಿ ಸಾರಿಗೆ ಮುಷ್ಕರ ನಡೆಸಿ ಹಲವು ತಿಂಗಳುಗಳು ಕಳೆದಿವೆ. ಈ ಮಧ್ಯೆ ಸಂಸ್ಥೆಯಲ್ಲಿರುವ ಎಲ್ಲ ಸಂಘಟನೆಗಳು ಹಲವಾರು ರೀತಿಯಲ್ಲಿ ಪ್ರಯತ್ನಪಟ್ಟರು ಮುಷ್ಕರದ ಸಮಯದಲ್ಲಿ ವಜಾ, ಅಮಾನತು, ವರ್ಗಾವಣೆ ಹಾಗೂ ಪೊಲೀಸ್ ಪ್ರಕರಣಗಳಾಗಿರುವುದಕ್ಕೆ ಪರಿಹಾರ ನೀಡುವಲ್ಲಿ ಸರ್ಕಾರ ಮತ್ತು ಸಾರಿಗೆ ಅಧಿಕಾರಿಗಳು ವಿಳಂಬನೀತಿ ಅನುಸರಿಸಿದ್ದಾರೆ.
ಹೀಗಾಗಿ ಸಾವಿರಾರು ನೌಕರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಳಂಬವಾಗುತ್ತಿದೆ. ಆಡಳಿತ ಮಂಡಳಿ ಆಗಬಹುದು ಇಲ್ಲ ಸರ್ಕಾರ ವಾಗಬಹುದು ಸಂಘಟನೆಯ ನಾಯಕರು ಭೇಟಿಯಾದಂತಹ ಸಂದರ್ಭದಲ್ಲಿ ಎಲ್ಲವನ್ನು ಸರಿಪಡಿಸುತ್ತೇವೆ, ಮಾಡಿಕೊಡುತ್ತೇವೆ ಎಂಬ ಭರವಸೆಯೊಂದಿಗೆ ಐದು ತಿಂಗಳು ಕಳೆದಿದ್ದಾರೆ. ಆದರೇ ಈವರೆಗೂ ಏನೊಂದು ಕೆಲಸವೂ ಆಗಿಲ್ಲ.
ಐದು ತಿಂಗಳಿನಿಂದಲೂ ಬರಿ ಭರವಸೆಗಳನ್ನೂ ನೀಡಿದ್ದಾರೆಯೇ ಹೊರತು ನೌಕರರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಈ ನಡುವೆ ನೌಕರರಿಗೆ ನ್ಯಾಯ ಸಿಗುವುದು ಇನ್ನೂ ತುಂಬಾ ವಿಳಂಬವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆದ್ದರಿಂದ ಈ ಎಲ್ಲ ವಿಚಾರವಾಗಿ ಚರ್ಚಿಸಿ ನೌಕರರ ಸಮಸ್ಯೆಗಳ ಇತ್ಯರ್ಥಕ್ಕಾಗಿ ಸಾರಿಗೆ ಸಂಸ್ಥೆಯಲ್ಲಿರುವ ಎಲ್ಲ ಸಂಘಟನೆಯ ಮುಖಂಡರು ಹಾಗೂ ನಾಲ್ಕೂ ನಿಗಮಗಳ ನೌಕರರು ಒಗ್ಗೂಡಿ ಒಂದು ಸಭೆ ಸೇರಬೇಕೆಂದು ತೀರ್ಮಾನಿಸಿದ್ದಾರೆ.
ಹಾಗಾಗಿ ಇದೇ ಸೆಪ್ಟಂಬರ್ 4ರ ಶನಿವಾರದಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಬೆಂಗಳೂರಿನ ಟೌನ್ ಹಾಲ್ ಹಿಂಭಾಗವಿರುವ ಎಸ್ಸಿ ಎಸ್ಟಿ ಸಮುದಾಯ ಭವನದಲ್ಲಿ ಸಭೆ ನಿಗದಿಪಡಿಸಲಾಗಿದೆ. ಈ ಸಭೆಯಲ್ಲಿ ಸಮಸ್ಯೆಗಳಿಗೆ ಒಳಗಾಗಿರುವ ಸಾರಿಗೆ ನೌಕರರ ಒಳಿತಿಗಾಗಿ ಸಂಸ್ಥೆಯಲ್ಲಿರುವ ಎಲ್ಲ ಸಂಘಟನೆಯ ಪ್ರಮುಖರು ಸಹ ಭಾಗವಹಿಸಿ ಒಗ್ಗಟ್ಟಾಗಿ ನ್ಯಾಯ ದೊರಕಿಸಿಕೊಳ್ಳುವ ಬಗ್ಗೆ ಚರ್ಚಿಸಬೇಕಿದೆ.
ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ನಿರ್ಧರಿಸುವುದನ್ನು ಸಾಮೂಹಿಕವಾಗಿ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುವುದು. ಈ ಸಲುವಾಗಿ ಎಲ್ಲರೂ ಒಗ್ಗೂಡಿ ಸಭೆಗೆ ಹಾಜರಾಗುವುದು ಪ್ರಮುಖವಾಗಿದೆ.

ಪತ್ರದ ಮೂಲಕ ವ್ಯವಹಾರ ನಡೆಸಲು ಸಮಯದ ಅಭಾವವಿರುವುದರಿಂದ ಹಲವಾರು ಸಂಘಟನೆಯ ನಾಯಕರಿಗೆ ದೂರವಾಣಿ ಕರೆ ಮಾಡಲು ನಿರ್ಧರಿಸಿದ್ದೇವೆ. ನಮಗೆ ದೂರವಾಣಿ ಕರೆ ಬಂದಿಲ್ಲವೆಂದು ಯಾವ ನಾಯಕರು ಹಿಂದೆ ಸರಿಯದೆ, ಈ ಮೆಸೇಜನ್ನು ನೋಡಿ ನೌಕರರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಎಲ್ಲರೂ ಬರಬೇಕೆಂದು ನೊಂದ ನೌಕರರು ಕೇಳಿಕೊಂಡಿದ್ದಾರೆ.
ಈ ಸಭೆ ಸೇರುವುದು ಪ್ರಮುಖವಾಗಿದೆ. ಕಾರಣ ಇದೇ ತಿಂಗಳ 13ರಿಂದ ವಿಧಾನಸಭಾ ಅಧಿವೇಶನವು ಪ್ರಾರಂಭವಾಗುತ್ತಿದ್ದು, ಕನಿಷ್ಠಪಕ್ಷ ಅಲ್ಲಿಯಾದರೂ ಈ ವಿಷಯ ಚರ್ಚೆಗೆ ಬಂದು ನಮ್ಮ ನೌಕರರ ಸಮಸ್ಯೆಗಳು ಬಗೆಹರಿಯಲಿ ಎಂಬುವುದು ನಮ್ಮ ಉದ್ದೇಶವಾಗಿದೆ ಎಂದು ತೊಂದರೆಗೆ ಸಿಲುಕಿರುವ ನೌಕರರು ತಿಳಿಸಿದ್ದಾರೆ.
Related


You Might Also Like
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...
ಜಿಬಿಎ: ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಐದು ನಗರ ಪಾಲಿಕೆಗಳ ಆಯುಕ್ತರು
ಬೆಂಗಳೂರು: ಐದು ನಗರ ಪಾಲಿಕೆಗಳ ಆಯುಕ್ತರಿಂದ ಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಇತ್ತ ಕೇಂದ್ರ ನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಭೆ...