ಜು.11ರಂದು ಸಾರಿಗೆ ನಿಗಮಗಳ ಎಂಡಿಗಳ ಜತೆ ಆರ್ಥಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ


ಬೆಂಗಳೂರು: ಸಾರಿಗೆ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳ ಕಾರ್ಯನಿರ್ವಹಣೆ, ಆದಾಯ- ವೆಚ್ಚ ಹಾಗೂ ಅವುಗಳ ಪ್ರಸ್ತುತ ಹೊಣೆಗಾರಿಕೆಗಳ ಕುರಿತು ಚರ್ಚಿಸಲು ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಇದೇ ಜುಲೈ 11 ರಂದು ಮಧ್ಯಾಹ್ನ 3ಗಂಟೆಗೆ ಸಭೆ ಕರೆಯಲಾಗಿದೆ.
ವಿಧಾನಸೌಧದ 2ನೇ ಮಹಡಿಯ ಕೊಠಡಿ ಸಂಖ್ಯೆ 255ರಲ್ಲಿ ಸಭೆಯನ್ನು ಕರೆಯಲಾಗಿದ್ದು ಈ ಸಭೆಗೆ ಪೂರ್ಣ ಮಾಹಿತಿಯೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಾಗುವಂತೆ ಆರ್ಥಿಕ ಇಲಾಖೆಯ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಶ್ರೀಕೃಷ್ಣ ಎನ್.ಬುಗಟ್ಯಾಗೋಳ ಸೂಚನೆ ನೀಡಿದ್ದಾರೆ.
ಸಭೆಗೆ ಸರ್ಕಾರದ ಕಾರ್ಯದರ್ಶಿ, ವಸತಿ ಇಲಾಖೆಯ ವಿ.ಅನ್ಬುಕುಮಾರ್ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ.
ಇನ್ನು ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸುಶೀಲಾ ಅವರು ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
Related
