NEWSನಮ್ಮಜಿಲ್ಲೆನಮ್ಮರಾಜ್ಯ

ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿಗೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಬೆಂಗಳೂರಿನ ಜಲಮೂಲಗಳನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ ಒತ್ತಾಯಿಸಿದರು.

ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಎಂಜಿ ರಸ್ತೆಯಲ್ಲಿ ಎಎಪಿ ಪತ್ರ ಚಳುವಳಿ ಅಭಿಯಾನ ನಡೆಸಿತು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಮೋಹನ್‌ ದಸಾರಿ ಅವರು, ತಮಿಳುನಾಡು ಸರ್ಕಾರವು ಕಾವೇರಿ ನೀರನ್ನು ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವ ನಿರ್ಣಯವನ್ನು ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದೆ.

ಆದರೆ ನಮ್ಮ ರಾಜ್ಯದಲ್ಲಿ ಸಂಕಷ್ಟ ಕಾಲದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ತಕ್ಷಣ ಸದನವನ್ನು ಕರೆದು ಬರ ಸಂಕಷ್ಟದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಬೇಕು ಎಂದರು.

ಎಂಜಿ ರಸ್ತೆಯ ಚರ್ಚ್‌ ಸ್ಟ್ರೀಟ್‌ ಮತ್ತು ಮ್ಯೂಸಿಯಂ ಅಡ್ಡ ರಸ್ತೆಯಲ್ಲಿ ಪಕ್ಷದ ಮುಖಂಡರು ಖುದ್ದಾಗಿ ಕಾರ್ಮಿಕರು, ಆಟೋ ಚಾಲಕರು, ಕಚೇರಿ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಬೆಂಗಳೂರಿನ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಪತ್ರ ಚಳುವಳಿ ನಡೆಸಿದರು. ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಈ ಸಂದರ್ಭ ಪಕ್ಷದ ಮುಖಂಡರಾದ ಜಗದೀಶ್‌ ಚಂದ್ರ, ಅನಿಲ್‌ ನಾಚಪ್ಪ, ವೀಣಾ ಸರಾವ್‌, ಸುಷ್ಮಾ ವೀರ್‌, ಮಹಾಲಕ್ಷ್ಮಿ, ಫ್ರಾನ್ಸಿಸ್‌, ಶಿವಕುಮಾರ್‌, ಜ್ಯೋತಿ, ಇರ್ಷಾದ್‌ ಸೇರಿದಂತೆ ಹಲವರು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು